ನವದೆಹಲಿ: ದೆಹಲಿಯ ನಾರ್ತ್ ಬ್ಲಾಕ್ ನಲ್ಲಿರುವ ಹಣಕಾಸು ಸಚಿವಾಲಯದಲ್ಲಿ ಬಜೆಟ್ ದಾಖಲೆಗಳ ಮುದ್ರಣಕ್ಕೆ ಚಾಲನೆ ನೀಡುವ ಮೊದಲು ಹಲ್ವಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವು ಸಾಮಾನ್ಯವಾಗಿ ಬಜೆಟ್ ದಾಖಲೆಗಳ ಮುದ್ರಣದ ಆರಂಭವನ್ನು ಸೂಚಿಸುತ್ತದೆ.


COMMERCIAL BREAK
SCROLL TO CONTINUE READING

ಹಲ್ವಾ ಸಮಾರಂಭದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್, ಹಣಕಾಸು ಕಾರ್ಯದರ್ಶಿ ಎಸ್.ಸಿ.ಗಾರ್ಗ್, ಹಣಕಾಸು ಕಾರ್ಯದರ್ಶಿ ಎ.ಬಿ.ಪಾಂಡೆ, ಕಂದಾಯ ಕಾರ್ಯದರ್ಶಿ, ರಾಜೀವ್ ಕುಮಾರ್ ಹಣಕಾಸು ಸೇವೆಗಳ ಇಲಾಖೆ ಮತ್ತು ಇಲಾಖೆಯ ಕಾರ್ಯದರ್ಶಿ ಅಟನು ಚಕ್ರವರ್ತಿ ಭಾಗವಹಿಸಿದ್ದರು. ಇದೇ ವೇಳೆ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ (ಡಿಐಪಿಎಎಂ), ಮತ್ತು ಇತರ ಅಧಿಕಾರಿಗಳು ಕೂಡ ಉಪಸ್ಥಿತರಿದ್ದರು.


ಭಾರತದ ಮೊದಲ ಪೂರ್ಣ ಪ್ರಮಾಣದ ಮಹಿಳಾ ಹಣಕಾಸು ಸಚಿವೆ ಎಂದು ಖ್ಯಾತಿ ಪಡೆದಿರುವ ನಿರ್ಮಲಾ ಸೀತಾರಾಮನ್ ಅವರು 2019-20 ರ ಹಣಕಾಸು ವರ್ಷದ ವಾರ್ಷಿಕ ಬಜೆಟ್ ಅನ್ನು ಜುಲೈ 5 ರಂದು ಮಂಡಿಸಲಿದ್ದಾರೆ. ಜುಲೈ 4 ರಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯ ವರದಿಯನ್ನು ಮಂಡಿಸಲಿದ್ದಾರೆ.ಬಜೆಟ್ ನ ಗೌಪ್ಯತೆಯನ್ನು ಕಾಪಾಡಿಕೊಳ್ಳಲು, ಬಜೆಟ್ ತಯಾರಿಕೆಯಲ್ಲಿ ತೊಡಗಿರುವ ಅಧಿಕಾರಿಗಳ ಲಾಕ್-ಇನ್ ಇದೆ.


ಹಣಕಾಸು ಸಚಿವಾಲಯದ ಹೇಳಿಕೆಯ ಪ್ರಕಾರ, ಸಿಬಿಡಿಟಿಯ ಅಧ್ಯಕ್ಷ ಪಿಸಿ ಮೋದಿ, ಸಿಬಿಐಸಿ ಮತ್ತು ಸಿಬಿಐಸಿ ಸದಸ್ಯರಾದ ಪಿಕೆ ದಾಸ್ ಮತ್ತು ಬಜೆಟ್ ಜಂಟಿ ಕಾರ್ಯದರ್ಶಿ ಅರವಿಂದ್ ಶ್ರೀವಾಸ್ತವ ಮತ್ತು ಹಣಕಾಸು ಸಚಿವಾಲಯದ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಬಜೆಟ್ ತಯಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.