`ದೇಶದಲ್ಲಿ ತುಕ್ಡೆ-ತುಕ್ಡೆ ಗ್ಯಾಂಗ್ ಅಸ್ತಿತ್ವದಲ್ಲಿದೆ`...!
ಮಾಹಿತಿ ಹಕ್ಕಿನ ಅಡಿಯಲ್ಲಿ ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾಹಿತಿ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಶಿ ತರೂರ್ `ತುಕ್ಡೆ-ತುಕ್ಡೆ ಗ್ಯಾಂಗ್` ಅಸ್ತಿತ್ವದಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ನವದೆಹಲಿ: ಮಾಹಿತಿ ಹಕ್ಕಿನ ಅಡಿಯಲ್ಲಿ ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾಹಿತಿ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಶಿ ತರೂರ್ 'ತುಕ್ಡೆ-ತುಕ್ಡೆ ಗ್ಯಾಂಗ್' ಅಸ್ತಿತ್ವದಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖ್ಲೆ ಅವರು ಕಳೆದ ವರ್ಷ ಡಿಸೆಂಬರ್ 26 ರಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪದೇ ತುಕಡೆ ತುಕಡೆ ಗ್ಯಾಂಗ್ ಪ್ರಸ್ತಾಪದ ಹಿನ್ನಲೆಯಲ್ಲಿ ಈ ವಿಚಾರವಾಗಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಈಗ ಗೃಹ ವ್ಯವಹಾರಗಳ ಸಚಿವಾಲಯವು ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿಯನ್ನು ಹೊಂದಿಲ್ಲ' ಎಂದು ತಿಳಿಸಿದೆ.
ಈ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ' ತುಕ್ಡೆ-ತುಕ್ಡೆ ಗ್ಯಾಂಗ್ ಅಸ್ತಿತ್ವದಲ್ಲಿದೆ. ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ ಮತ್ತು ದೇಶವನ್ನು ವಿಭಜಿಸುತ್ತಿದ್ದಾರೆ ' ಎಂದು ಟ್ವೀಟ್ ಮಾಡಿದ್ದಾರೆ.
ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಗಳಲ್ಲಿ ಮುಸ್ಲಿಮೇತರ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆ ಮಾಡುವ ಹೊಸ ಪೌರತ್ವ ಕಾಯ್ದೆಯನ್ನು ಸಂಸತ್ತು ಅಂಗೀಕರಿಸಿದ ನಂತರ, ಈ ಕಾಯ್ದೆಯನ್ನು ಖಂಡಿಸಿ ದೇಶಾದ್ಯಂತ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಭುಗಿಲೆದ್ದವು. ಈ ಪ್ರತಿಭಟನೆ ಹಿನ್ನಲೆಯಲ್ಲಿ ಕಾಂಗ್ರೆಸ್ ಮತ್ತು ಇತರರಿಗೆ 'ತುಕ್ಡೆ-ತುಕ್ಡೆ ಗ್ಯಾಂಗ್' ಎಂದು ಕೇಂದ್ರ ಗೃಹ ಸಚಿವರು ಆರೋಪಿಸಿದ್ದರು.
ಈಗ ಗೃಹ ಸಚಿವಾಲಯದಿಂದ ಉತ್ತರ ಪಡೆದಿರುವ ಮಾಹಿತಿ ಹಕ್ಕು ಕಾರ್ಯಕರ್ತ ಸಾಕೇತ್ ಗೋಖ್ಲೆ 'ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ಇಲ್ಲದಿದ್ದರೆ, ನಾವು ಯಾವಾಗಲೂ ನ್ಯಾಯಾಂಗವನ್ನು ಸಂಪರ್ಕಿಸಬೇಕಾಗುತ್ತದೆ. ನಾನು 'ತುಕ್ಡೆ-ತುಕ್ಡೆ ಗ್ಯಾಂಗ್' ಎಂದು ಕರೆಯಲ್ಪಡುವ ಜನರೊಂದಿಗೆ ಮಾತನಾಡುತ್ತೇನೆ ಮತ್ತು ಮಾನಹಾನಿ ಪ್ರಕರಣವನ್ನು ದಾಖಲಿಸುತ್ತೇವೆ ಏಕೆಂದರೆ ಇದನ್ನು ನಿಲ್ಲಿಸಬೇಕಾಗಿದೆ ಎಂದು' ಗೋಖಲೆ ಹೇಳಿದ್ದಾರೆ.