ನವದೆಹಲಿ: ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಮಧ್ಯ ಭಾರತದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಹೇಳಿದೆ.


COMMERCIAL BREAK
SCROLL TO CONTINUE READING

ಕರಾವಳಿ ಪ್ರದೇಶ, ಗೋವಾ ಮತ್ತು ಗುಜರಾತ್ ಪ್ರದೇಶದ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ. ಅರೇಬಿಯನ್ ಸಮುದ್ರ, ಬಂಗಾಳಕೊಲ್ಲಿಯಲ್ಲಿ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು ಗುಜರಾತ್-ಮಹಾರಾಷ್ಟ್ರ-ಗೋವಾ-ಕರ್ನಾಟಕದ ತೀರಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
 
ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಛತ್ತೀಸ್‌ಗಢ ಮತ್ತು ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಉತ್ತರ ಭಾರತದಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಐಎಂಡಿ ಎಚ್ಚರಿಸಿದೆ.


ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ-ಒತ್ತಡದ ಪ್ರದೇಶವು ಹೆಚ್ಚಾಗುವ ಸಾಧ್ಯತೆಯಿದ್ದು ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ ಮತ್ತು ಅಂಡಮಾನ್ ತೀರಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.


ಮುಂಬೈ 30 ಗಂಟೆಗಳಿಂದ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ಅತಿಯಾದ ಮಳೆ ಮತ್ತು ಜಲಾವೃತತೆಯಿಂದಾಗಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲಾಗಿದೆ. ನಲಸೋಪರಾ, ಸಂತಕ್ರೂಜ್, ವಾಸೈ, ವಿರಾರ್, ಸಿಯಾನ್, ಕುರ್ಲಾ, ಅಂಧೇರಿ, ಮಲಾಡ್ ಮತ್ತು ವಿಲೇ ಪಾರ್ಲೆ ಮುಂತಾದ ಪ್ರದೇಶಗಳಲ್ಲಿ ಮಂಡಿಯವರೆಗೆ ನೀರು ಹರಿಯುತ್ತಿರುವ ಬಗ್ಗೆ ವರದಿಯಾಗಿದೆ. ಸ್ಥಳೀಯ ರೈಲು ಸೇವೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಒಳಬರುವ ಅನೇಕ ರೈಲುಗಳನ್ನು ಭಾನುವಾರ ರದ್ದುಗೊಳಿಸಲಾಗಿದೆ ಇದಲ್ಲದೆ ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ.


ಛತ್ತೀಸ್‌ಗಢದಲ್ಲಿ, ಬಸ್ತಾರ್ ಜಿಲ್ಲೆಯ ಜಗದಾಲ್‌ಪುರದ ತೀರತ್‌ಗಢದಲ್ಲಿನ ನೀರಿನ ಮಟ್ಟವು ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಹೆಚ್ಚಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.