ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ಹಾಗೂ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಮೈತ್ರಿ ವಿಚಾರಗಳ ಕುರಿತಾಗಿ ಹರಡಿದ್ದ ಎಲ್ಲ ಊಹಾಪೋಹಗಳಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಂತಿಮ ತೆರೆ ಎಳೆದಿದ್ದಾರೆ. ದೆಹಲಿಯ ಎಲ್ಲ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ,ಆದ್ದರಿಂದ ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲವೆಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.


COMMERCIAL BREAK
SCROLL TO CONTINUE READING

ಕಳೆದ ವಾರ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದ ಶೀಲಾ ದಿಕ್ಶಿತ ಇದುವರೆಗೆ ಯಾವುದೇ ಮೈತ್ರಿ ಇಲ್ಲವೆಂದು ಹೇಳಿದ್ದರು. ಇದಾದ ನಂತರ ಆಮ್ ಆದ್ಮಿ ಪಕ್ಷವು ರಾಹುಲ್ ಗಾಂಧಿಯವರಿಗೆ ದೆಹಲಿಯಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಮರುಚಿಂತನೆ ಮಾಡಬೇಕೆಂದು ಆಗ್ರಹಿತ್ತು. ದೆಹಲಿಯಲ್ಲಿ ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಆಂದೋಲನದ ಮೂಲಕ ಮುಖ್ಯ ಪರದೆಗೆ ಬಂದ ಅರವಿಂದ್ ಕೇಜ್ರಿವಾಲ್ 15 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಕಿತ್ತೆಸೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.


ಈಗ ಮತಗಳಲ್ಲಿ ವಿಭಜನೆಯಾಗಬಾರದು ಎನ್ನುವ ಕಾರಣಕ್ಕೆ ಆಮ್ ಆದ್ಮಿ ಪಕ್ಷವು ಕೂಡ ಕಾಂಗ್ರೆಸ್ ಜೊತೆ ಮೈತ್ರಿ ಮುಂದಾಗಿತ್ತು, ಆದರೆ ಇದಕ್ಕೆ ಕಾಂಗ್ರೆಸ್ ಪಕ್ಷವು ಮಾತ್ರ ಸುತಾರಾಂ ಒಪ್ಪಿಗೆ ನೀಡಲಿಲ್ಲ. ಇನ್ನೊಂದೆಡೆಗೆ ಕಾಂಗ್ರೆಸ್ ನ ಇತರ ಮಿತ್ರ ಪಕ್ಷಗಳು ಕೂಡ ಆಪ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಸಲಹೆ ನೀಡಿದ್ದವು.ಆದರೆ ಈಗ ಇದ್ಯಾವುದಕ್ಕೂ ಮಣೆ ಹಾಕದೆ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.