ನವದೆಹಲಿ: ಕರ್ತಾರ್‌ಪುರ ಕಾರಿಡಾರ್‌ನ ಉದ್ಘಾಟನಾ ಸಮಾರಂಭಕ್ಕೆ ತಾವು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗುರುವಾರ ಸ್ಪಷ್ಟಪಡಿಸಿದ್ದಾರೆ. ಅದೇ ರೀತಿಯಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಭಾವಿಸಿರುವುದಾಗಿ  ಅಮರಿಂದರ್ ಸಿಂಗ್ ಹೇಳಿದ್ದಾರೆ.



COMMERCIAL BREAK
SCROLL TO CONTINUE READING

ಮನಮೋಹನ್ ಸಿಂಗ್ ಅವರು ಪಾಕಿಸ್ತಾನದ ಆಹ್ವಾನವನ್ನು ಸ್ವೀಕರಿಸಿದ್ದಾರೆ ಮತ್ತು ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಗೆ ಹೋಗಲಿದ್ದಾರೆ ಎಂಬ ಮಾಧ್ಯಮಗಳ ವರದಿ ಹಿನ್ನಲೆಯಲ್ಲಿ ಪಂಜಾಬ್ ಸಿಎಂ ಸ್ಪಷ್ಟನೆ ನೀಡಿದ್ದಾರೆ. 'ನಾನು ಕರ್ತಾರ್‌ಪುರ ಕಾರಿಡಾರ್ ಉದ್ಘಾಟನಾ ಸಮಾರಂಭಕ್ಕಾಗಿ ಹೋಗುತ್ತಿಲ್ಲ ಮತ್ತು ಡಾ.ಮನಮೋಹನ್ ಸಿಂಗ್ ಕೂಡ ಹೋಗುವುದಿಲ್ಲ ಎಂದು ನಾನು ಭಾವಿಸುತ್ತೇನೆ' ಎಂದು ಅಮರೀಂದರ್ ಸಿಂಗ್ ಹೇಳಿಕೆಯನ್ನು ಎಎನ್‌ಐ ಉಲ್ಲೇಖಿಸಿದೆ.


ಭಾರತೀಯ ವಿದೇಶಾಂಗ ಸಚಿವಾಲಯದಿಂದ ಅನುಮತಿ ಪಡೆದ ನಂತರ ಸರ್ವಪಕ್ಷಗಳ ನಿಯೋಗವು 2019 ರ ಅಕ್ಟೋಬರ್ 30 ರಿಂದ ನವೆಂಬರ್ 3 ರ ನಡುವೆ ಯಾತ್ರಿಕರಾಗಿ ನಂಕಾನಾ ಸಾಹಿಬ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಯೋಜಿಸುತ್ತಿದೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.