ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ಮೇಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರದಂದು ವಾಗ್ದಾಳಿ ನಡೆಸಿದ್ದಾರೆ. 


COMMERCIAL BREAK
SCROLL TO CONTINUE READING

ಪ.ಬಂಗಾಳದಲ್ಲಿ ರ್ಯಾಲಿಯಲ್ಲಿ ಭಾಗವಹಿಸಲು ಅನುಮತಿ ನೀಡದ ಹಿನ್ನಲೆಯಲ್ಲಿ ಕಿಡಿಕಾರಿರುವ ಸಿಎಂ ಯೋಗಿ ತಮ್ಮ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.ಭಾನುವಾರ ದಕ್ಷಿಣ ದಿನಾಜ್ಪುರ್ ಜಿಲ್ಲೆಯ ಬಲರ್ಘಾಟ್ನಲ್ಲಿ ನಡೆದ "ಗಣಂತ್ರರಾ ಬಚಾವೊ ರಾಲಿಯಲ್ಲಿ ಭಾಗವಹಿಸಬೇಕಿದ್ದ ಉತ್ತರಪ್ರದೇಶದ ಮುಖ್ಯಮಂತ್ರಿ ಹೆಲಿಕ್ಯಾಪ್ಟರ್ಗೆ ಇಳಿಯಲು ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ನಂತರ  ರ್ಯಾಲಿಯನ್ನು ಉದ್ದೇಶಿಸಿ ಅವರು ಲಖನೌದಿಂದ ದೂರವಾಣಿ ಮೂಲಕ ಮಾತನಾಡಬೇಕಾಯಿತು.


ಪ.ಬಂಗಾಳದಲ್ಲಿನ ಸರ್ಕಾರವು ಪ್ರಜಾಪ್ರಭುತ್ವದ ಹಕ್ಕುಗಳನ್ನು ಹೇಗೆ ಹತ್ತಿಕ್ಕುತ್ತದೆ ಎನ್ನುವುದನ್ನು ಈ ರ್ಯಾಲಿಯಲ್ಲಿ ಭಾಗವಹಿಸಿದ ಎಲ್ಲ ನಾಯಕರು ಆತ್ಮಾವಲೋಕ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಅಲ್ಲದೆ ಮಮತಾ ಬ್ಯಾನರ್ಜಿ ಅವರು ಸರ್ಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಲ್ಲದೆ ಅಧಿಕಾರಿ ವರ್ಗವು ಕೂಡ ತೃಣಮೂಲ ಪಕ್ಷದ ಕೇಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.