ನವದೆಹಲಿ: ಗುಜರಾತಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ ಕಮಿಟಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಈ ಯುದ್ಧವನ್ನು ಗೆಲ್ಲುತ್ತೇವೆ ಎಂದು ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

"ಗಾಂಧಿಜೀಯವರ ಐತಿಹಾಸಿಕ ದಂಡಿ ಸತ್ಯಾಗ್ರಹದ ವಾರ್ಷಿಕೋತ್ಸವದ ದಿನದಂದು ಅಹ್ಮದಾಬಾದ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಆರೆರೆಸ್ಸ್/ಬಿಜೆಪಿ ಸಿದ್ಧಾಂತವಾದ ಫ್ಯಾಸಿಸಂ, ದ್ವೇಷ, ವಿಭಜನೆಯಂತಹ ವಿಚಾರಗಳನ್ನು ಸೋಲಿಸುವ ನಿರ್ಧಾರ ಕೈಗೊಳ್ಳಲಾಗಿದೆ.ಈ ಯುದ್ಧವನ್ನು ಗೆಲ್ಲಲಾಗುತ್ತದೆ" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ



ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿಯ ಚುನಾವಣೆ ತನ್ನ ಅಸ್ಮಿತೆ ಪ್ರಶ್ನೆಯಾಗಿದೆ.ಆದ್ದರಿಂದ ಈ ಬಾರಿ ಗೆಲ್ಲುವ ಪ್ರಯತ್ನ ಮಾಡುತ್ತಿದೆ.ಇತ್ತೀಚಿಗಷ್ಟೇ ರಾಜಸ್ತಾನ, ಮಧ್ಯ ಪ್ರದೇಶ,ಚತ್ತೀಸ್ ಗಡ್ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಚೇತರಿಸಿಕೊಂಡಿರುವ ಕಾಂಗ್ರೆಸ್ ಪಕ್ಷ, ಮತ್ತೆ ಲೋಕಸಭಾ ಚುನಾವಣೆಯಲ್ಲಿ ತನ್ನ ಅಂಕಿಯನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿದೆ.


ಲೋಕಸಭೆಯಲ್ಲಿ 80 ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಪುನಚ್ಚೇತನಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಈಗ ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶದ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ.  


ಇನ್ನೊಂದೆಡೆ ಬಿಜೆಪಿಯೂ ಕೂಡ ಈ ಲೋಕಸಭಾ ಚುನಾವಣೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರ ಹಿಡಿಯುವ ಧಾವಂತದಲ್ಲಿದೆ ಎನ್ನಲಾಗಿದೆ.