ನವದೆಹಲಿ : ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ (BJP)ಅಭೂತ ಪೂರ್ವ ಸಾಧನೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra MOdi)ಇಂದು ಸಂಜೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು (BJP Workers)ಉದ್ದೇಶಿಸಿ ಮಾತನಾಡಲಿದ್ದಾರೆ. ಟ್ರೆಂಡ್‌ಗಳಲ್ಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರತೀಯ ಜನತಾ ಪಕ್ಷವು ಬಹುಮತ ಗಳಿಸಿದೆ. ಮಣಿಪುರ ಮತ್ತು ಗೋವಾಗಳಲ್ಲೂ ಉತ್ತಮ ಸಾಧನೆಯನ್ನೇ ಮಾಡಿದೆ. 


COMMERCIAL BREAK
SCROLL TO CONTINUE READING

ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವ :
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಜಯಭೇರಿ ಹಿನ್ನೆಲೆಯಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ (BJP Celebrations) ಆಚರಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ (PM Narendra Modi) ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


ಇದನ್ನೂ ಓದಿ  : ಉತ್ತರಾಖಂಡದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತ , ಸಿಎಂ ಆಕಾಂಕ್ಷಿ ಹರೀಶ್ ರಾವತ್ ಗೆ ಸೋಲು


ಉತ್ತರಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ :
ರಾಜಕೀಯವಾಗಿ ನಿರ್ಣಾಯಕ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಸತತ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ.  ಇತರ ಮೂರು ರಾಜ್ಯಗಳಲ್ಲಿ ಟ್ರೆಂಡ್‌ಗಳಲ್ಲಿ ಪಕ್ಷ ಮುನ್ನಡೆ ಸಾಧಿಸುತ್ತಿದೆ.  ಚುನಾವಣಾ ಆಯೋಗದ ವೆಬ್‌ಸೈಟ್ (Election Commission website)ಪ್ರಕಾರ ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ (Election Result 2022). 


2017ರಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು :
ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ, ಉತ್ತರ ಪ್ರದೇಶದ ಒಟ್ಟು 403 ಸ್ಥಾನಗಳಲ್ಲಿ, ಆಡಳಿತ ಪಕ್ಷಗಳು 243 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿವೆ (UP Election Result). ಈ ಹಿಂದೆ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಗೆದ್ದಿರುವ ಸ್ಥಾನಗಳಲ್ಲಿ ವ್ಯತ್ಯಾಸ ಇರಬಹುದು. ಆದರೆ ಅರ್ಧಕ್ಕಿಂತ ಹೆಚ್ಚು ಸ್ಥಾನಗಳನ್ನು ಬಿಜೆಪಿ ಸುಲಭವಾಗಿ ಗೆಲ್ಲುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಮೂರು ದಶಕಗಳ ನಂತರ ರಾಜ್ಯದಲ್ಲಿ ಪಕ್ಷವೊಂದು ಸತತ ಎರಡನೇ ಅವಧಿಗೆ ಸರ್ಕಾರ ರಚಿಸುತ್ತಿದೆ. 


ಇದನ್ನೂ ಓದಿ  : Punjab Election Result: ಪಂಜಾಬ್ ನಲ್ಲಿ ಕಾಂಗ್ರೆಸ್ ಸೋಲಿನ ನಂತರ ಸಿದ್ದು ನೀಡಿದ ಮೊದಲ ಹೇಳಿಕೆ ಏನು ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.