ಕರೋನಾ ಸಮಯದಲ್ಲಿ ವಿದೇಶಗಳಿಂದ ಸಿಗುತ್ತಿರುವ ಸಹಾಯದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ಹೀಗಿತ್ತು..!
ಕರೋನಾ ಕಾಲದಲ್ಲಿ ವಿದೇಶಗಳಿಂದ ಭಾರತಕ್ಕೆ ಸಿಗುತ್ತಿರುವ ಸಹಾಯದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ವಿದೇಶಗಳಿಂದ ಸಿಗುತ್ತಿರುವ ಸಹಾಯದ ಬಗ್ಗೆ ಎದೆಯುಬ್ಬಿಸಿ ಹೇಳಿಕೊಳ್ಳುತ್ತಿರುವುದು ನಿಜಕ್ಕೂ ಶೋಚನೀಯವಾಗಿದೆ ಎಂದವರು ಹೇಳಿದ್ದಾರೆ.
ನವದೆಹಲಿ : ಕೊರೊನಾವೈರಸ್ ಎರಡನೇ ಅಲೆಯಿಂದಾಗಿ (Coronavirus Second wave) ಭಾರತ ತತ್ತರಿಸಿ ಹೋಗಿದೆ. ಇಡೀ ದೆಶದಲ್ಲಿ ಕರೋನಾ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಾಸಿಗೆ, ಆಮ್ಲಜನಕದ (Oxygen) ಕೊರತೆ ಕೂಡಾ ಕಾಡುತ್ತಿದೆ. ಹೀಗಿರುವಾಗ ಹಲವಾರು ದೇಶಗಳು ಭಾರತಕ್ಕೆ ಸಹಾಯ ಮಾಡಲು ಮುಂದಾಗಿವೆ. ಭಾರತ ಕೂಡಾ ವಿದೇಶಗಳಿಂದ ನೆರವು ಪಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ವಿದೇಶಿ ಸಹಾಯದ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ :
ಕರೋನಾ (Coronavirus) ಕಾಲದಲ್ಲಿ ವಿದೇಶಗಳಿಂದ ಭಾರತಕ್ಕೆ ಸಿಗುತ್ತಿರುವ ಸಹಾಯದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಟ್ವೀಟ್ ಮಾಡಿದ್ದಾರೆ. ವಿದೇಶಗಳಿಂದ ಸಿಗುತ್ತಿರುವ ಸಹಾಯದ ಬಗ್ಗೆ ಎದೆಯುಬ್ಬಿಸಿ ಹೇಳಿಕೊಳ್ಳುತ್ತಿರುವುದು ನಿಜಕ್ಕೂ ಶೋಚನೀಯವಾಗಿದೆ ಎಂದವರು ಹೇಳಿದ್ದಾರೆ. ಭಾರತ ಸರ್ಕಾರ ತನ್ನ ಕೆಲಸವನ್ನು ಸರಿಯಾಗಿ ನಿಭಾಯಿಸಿದ್ದರೆ, ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.
Assam CM : ಹಿಮಾಂತ ಬಿಸ್ವಾ ಶರ್ಮಾ ಇಂದು ಅಸ್ಸಾಂ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ!
ಕಳೆದ 24 ಗಂಟೆಯಲ್ಲಿ 3 ಲಕ್ಷ 66 ಸಾವಿರ 161 ಮಂದಿಗೆ ಕರೋನಾ :
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3 ಲಕ್ಷ 66 ಸಾವಿರ 161 ಮಂದಿ ಕರೋನಾ (COVID-19)ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೆ, 3754 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ, ಭಾರತದಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ, 2 ಕೋಟಿ 26 ಲಕ್ಷ 62 ಸಾವಿರ 575 ಕ್ಕೆ ಏರಿದೆ. ಇದರಲ್ಲಿ 2 ಲಕ್ಷ 46 ಸಾವಿರ 116 ಜನರು ಪ್ರಾಣ ಕಳೆದುಕೊಂಡಿದ್ದಾರೆ. ದೇಶಾದ್ಯಂತ ಇಲ್ಲಿವರೆಗೆ ಕೋವಿಡ್ -19 ರಿಂದ 1 ಕೋಟಿ 86 ಲಕ್ಷ 71 ಸಾವಿರ 222 ಜನ ಗುಣಮುಖರಾಗಿದ್ದಾರೆ.
ಇದನ್ನೂ ಓದಿ : IMD- ಮುಂದಿನ 3 ದಿನಗಳವರೆಗೆ ದೇಶದ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.