ನವದೆಹಲಿ: 70 ವರ್ಷ ಮೇಲ್ಪಟ್ಟವರನ್ನು ಕೂಡ ಆಯುಷ್ಮಾನ್ ಯೋಜನೆ ವ್ಯಾಪ್ತಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.ಒಂದು ಕುಟುಂಬದಲ್ಲಿ 70 ವರ್ಷ ಮೇಲ್ಪಟ್ಟ ಇಬ್ಬರು ವ್ಯಕ್ತಿಗಳಿದ್ದರೆ 5 ಲಕ್ಷ ರೂ.ಗಳ ವಿಮೆ ಹಂಚಿಕೆಯಾಗುತ್ತದೆ. ಇದಕ್ಕಾಗಿ ಸರ್ಕಾರ ಶೀಘ್ರವೇ ಸಂಪೂರ್ಣ ಯೋಜನೆ ರೂಪಿಸಲಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ಪುಷ್ಪ ರಾಜ್ ಹಾಡಿಗೆ ರೀಲ್ಸ್  ಮಾಡಿ ಶೇರ್ ಮಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್: ವೈರಲ್ ವಿಡಿಯೋಗೆ ನೆಟ್ಟಿಗರು ಏನಂದ್ರು? 


ಹೆಚ್ಚುತ್ತಿರುವ ವೈದ್ಯಕೀಯ ವೆಚ್ಚದ ಹೊರೆಯಿಂದ ಜನರಿಗೆ ಪರಿಹಾರ ನೀಡಲು ಕೇಂದ್ರದ ಸರ್ಕಾರವು 2018 ರ ಬಜೆಟ್‌ನಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಪ್ರಾರಂಭಿಸಿತು.ಈ ಯೋಜನೆಯಡಿ, ಕಾರ್ಡುದಾರರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸಾ ಸೌಲಭ್ಯವನ್ನು ನೀಡಲಾಗುತ್ತದೆ.ಈ ಕಾರ್ಡ್‌ನಲ್ಲಿ ನೀವು ಯಾವುದೇ ಖಾಸಗಿ ಆಸ್ಪತ್ರೆಯಲ್ಲಿಯೂ ಸಹಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.


ಇದನ್ನೂ ಓದಿ- ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ


ಸರ್ಕಾರದ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಇಂದಿನ ಸಚಿವ ಸಂಪುಟ ಸಭೆಯಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಆಯುಷ್ಮಾನ್ ಭಾರತ್ ಯೋಜನೆಯಡಿ ಒಳಪಡಿಸುವ ನಿರ್ಧಾರ ಕೈಗೊಂಡಿರುವ ಮಹತ್ವದ ನಿರ್ಧಾರವಾಗಿದೆ.ಈ ನಿರ್ಧಾರದ ಹಿಂದೆ ಮಾನವೀಯ ಚಿಂತನೆ ಇದೆ.ಈ ನಿರ್ಧಾರದ ನಂತರ ಬಡವರು, ಮಧ್ಯಮ ವರ್ಗದವರು ಅಥವಾ ಮೇಲ್ಮಧ್ಯಮ ವರ್ಗದವರು 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ವೃದ್ಧರೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm 
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.