370 ನೇ ವಿಧಿ ರದ್ದತಿಗೆ ವ್ಯಂಗ್ಯ ಮಾಡಿದವರನ್ನು ಇತಿಹಾಸ ಗಮನಿಸಲಿದೆ- ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ್ದನ್ನು ಅಪಹಾಸ್ಯ ಮಾಡಿದವರ ಬಗ್ಗೆ ಇತಿಹಾಸದಲ್ಲಿ ಉಲ್ಲೇಖವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Last Updated : Oct 17, 2019, 02:15 PM IST
 370 ನೇ ವಿಧಿ ರದ್ದತಿಗೆ ವ್ಯಂಗ್ಯ ಮಾಡಿದವರನ್ನು ಇತಿಹಾಸ ಗಮನಿಸಲಿದೆ- ಪ್ರಧಾನಿ ಮೋದಿ  title=
Photo courtesy: ANI

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ್ದನ್ನು ಅಪಹಾಸ್ಯ ಮಾಡಿದವರ ಬಗ್ಗೆ ಇತಿಹಾಸದಲ್ಲಿ ಉಲ್ಲೇಖವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪಾರ್ಲಿಯಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ವಾರ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯು ಬಿಜೆಪಿಯ ಕಾರ್ಯಶಕ್ತಿ ಮತ್ತು ಪ್ರತಿಪಕ್ಷದ ಸ್ವಾರ್ಥಶಕ್ತಿ ನಡುವಿನ ಯುದ್ಧವಾಗಿದೆ ಎಂದರು.

'370 ನೇ ವಿಧಿಯನ್ನು ರದ್ದುಪಡಿಸುವುದನ್ನು ಅಪಹಾಸ್ಯ ಮಾಡಿದ ಪ್ರತಿಯೊಬ್ಬ ವ್ಯಕ್ತಿಯನ್ನೂ ಇತಿಹಾಸವು ಗಮನಿಸುತ್ತದೆ' ಎಂದು ಅವರು ಹೇಳಿದರು. ಕಾಂಗ್ರೆಸ್ ಮತ್ತು ಎನ್‌ಸಿಪಿ ನಾಯಕರನ್ನು ಮತ್ತಷ್ಟು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದ ಅವರು, ನಿರಾಶೆಗೊಂಡ ಮತ್ತು ಖಿನ್ನತೆಗೆ ಒಳಗಾದವರು ಜನರಿಗೆ ಏನಾದರೂ ಒಳ್ಳೆಯದನ್ನು ಮಾಡಬಹುದೇ ಎಂದರು. 'ಸಾರ್ವಜನಿಕ ಹಣವನ್ನು ಲೂಟಿ ಮಾಡಿದವರನ್ನು ಜೈಲಿಗೆ ಹಾಕುವ ಪ್ರಕ್ರಿಯೆ ಪ್ರಾರಂಭವಾಗಿದೆ' ಎಂದು ಪ್ರಧಾನಿ ಹೇಳಿದರು.

ಅಕ್ಟೋಬರ್ 21 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಹಿಂದಿನ ಎಲ್ಲಾ ಗೆಲುವಿನ ದಾಖಲೆಗಳನ್ನು ಮುರಿಯಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

Trending News