ಪಾಟ್ನಾ: ಪಾಟ್ನಾದಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ರ‍್ಯಾಲಿಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದವನನ್ನು ಪಾಟ್ನಾ ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಬಿಹಾರ ರಾಜಧಾನಿ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಮಾರ್ಚ್ 3 ರಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಬೃಹತ್ ರ‍್ಯಾಲಿಯನ್ನು ಆಯೋಜಿಸಿದೆ. ರ‍್ಯಾಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ನಿತೀಶ್ ಕುಮಾರ್, ಕೇಂದ್ರ ಸಚಿವ ಮತ್ತು ಎಲ್ಜೆಪಿ (ಎಲ್ಜೆಪಿ) ವರಿಷ್ಠ ರಾಮ್ ವಿಲಾಸ್ ಪಾಸ್ವಾನ್ ಮತ್ತು ಅಮಿತ್ ಶಾ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಈ ರ‍್ಯಾಲಿಯಲ್ಲಿ ಬಾಂಬ್ ದಾಳಿ ನಡೆಸಿ ಕಾರ್ಯಕರ್ತರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿತ್ತು.


ಬಾಂಬ್ ದಾಳಿ ನಡೆಸಿ ಕಾರ್ಯಕರ್ತರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ  47 ವರ್ಷದ ವ್ಯಕ್ತಿ ಉದಯನ್ ರಾಯ್ ಎಂಬುವವನನ್ನು ಪಾಟ್ನಾದ ಅದಾಲತ್ ಗಂಜ್ ಮೋಹಲ್ಲದಿಂದ ಕೊಟ್ವಾಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಕಡಕು ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ದಾರ್ಯಾಪುರದ ನಿವಾಸಿ ಎಂಬುದನ್ನು ವ್ಯಾಟ್ಅಪ್ ಗ್ರೂಪ್ ಮೆಸೇಜ್ ನಿಂದ ಪತ್ತೆ ಹಚ್ಚಲಾಗಿದ್ದು, ಪಾಟ್ನಾ ಪೊಲೀಸರಿಂದ ಮಾಹಿತಿ ಪಡೆದ ನಂತರ ಕೊಟ್ವಾಲಿ ಪೊಲೀಸರು ಉದಯನ್ ರೈ ಅವರನ್ನು ಬಂಧಿಸಿದ್ದಾರೆ. ಬಂಧಿತನನ್ನು ವಿಚಾರಣೆಗೆ ಒಳಪಡಿಸಲಾಗಿದೆ.