ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವು, 9 ಮಂದಿಗೆ ಗಾಯ

ಟ್ರ್ಯಾಕ್ಟರ್ ವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

Last Updated : Apr 11, 2019, 06:19 PM IST
ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವು, 9 ಮಂದಿಗೆ ಗಾಯ title=
Pic Courtesy: ANI

ಗಡಚಿರೋಲಿ: ಜನರನ್ನು ಕೂರಿಸಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಮಹಾರಾಷ್ಟ್ರದ ಗಡಚಿರೋಲಿ ಜಿಲ್ಲೆಯ ಶಂಕರಪುರ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಮೃತರು ಮತ್ತು ಗಾಯಾಳುಗಳು ಮತದಾನ ಮಾಡಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ

Trending News