ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್.ಆರ್.ವೆಂಕಟಪುರಂ ಗ್ರಾಮದಲ್ಲಿ ಫಾರ್ಮಾ ಕಂಪನಿಯೊಂದರಲ್ಲಿ ರಾಸಾಯನಿಕ ಅನಿಲ ಸೋರಿಕೆಯಾದ ಕಾರಣ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಇಂದು ಬೆಳಿಗ್ಗೆ ನಡೆದಿದೆ.
#UPDATE 3 persons, including one child, dead after chemical gas leakage at LG Polymers industry in RR Venkatapuram village, Visakhapatnam: District Medical & Health Officer (DMHO). #AndhraPradesh https://t.co/sEx1YdgeOZ
— ANI (@ANI) May 7, 2020
ಕಣ್ಣು ಉರಿ ಮತ್ತು ಉಸಿರಾಟದ ತೊಂದರೆ ಕಂಡು ಬಂದ ಹಿನ್ನೆಲೆಯಲ್ಲಿ ಇತರ ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಗ್ನಿಶಾಮಕ ಟೆಂಡರ್ಗಳು ಮತ್ತು ಆಂಬುಲೆನ್ಸ್ಗಳನ್ನು ಸ್ಥಳಕ್ಕೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ತಂಡವು ಹತ್ತಿರದ ಹಳ್ಳಿಗಳಿಂದ ಜನರನ್ನು ಸ್ಥಳಾಂತರಿಸುತ್ತಿದೆ.
"ಗೋಪಾಲ್ಪಟ್ನಂನ ಎಲ್ಜಿ ಪಾಲಿಮರ್ಸ್ನಲ್ಲಿ ( LG Polymers) ಅನಿಲ ಸೋರಿಕೆಯಾಗಿದ್ದು ಸ್ಥಳೀಯ ಗ್ರಾಮೀಣ ಪ್ರದೇಶದ ಜನರ ಸುರಕ್ಷತಾ ಮುನ್ನೆಚ್ಚರಿಕೆಗಳಿಗಾಗಿ ಈ ಸ್ಥಳಗಳ ಸುತ್ತಲಿನ ನಾಗರಿಕರು ಮನೆಗಳಿಂದ ಹೊರಬರದಂತೆ ವಿನಂತಿಸುತ್ತಿದ್ದಾರೆ" ಎಂದು ಗ್ರೇಟರ್ ವಿಶಾಖಪಟ್ಟಣಂ ಮಹಾನಗರ ಪಾಲಿಕೆ ಟ್ವೀಟ್ ಮಾಡಿದೆ.
There is gas leakage identified at LG Polymers in Gopalpatnam. Requesting Citizens around these locations not to come out of houses for the sake of safety precautions.
— Greater Visakhapatnam Municipal Corporation (GVMC) (@GVMC_OFFICIAL) May 7, 2020
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾದ ಫೋಟೋಗಳಲ್ಲಿ ಕನಿಷ್ಠ ನೂರು ಜನರು ಗಾಯಾಳುಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ಗಳಿಗಾಗಿ ಕಾಯುತ್ತಿರುವ ದೃಶ್ಯಗಳು ಕಂಡು ಬಂದಿವೆ. ಕೆಲವು ಜನರು ಮಾಸ್ಕ್ ಗಳನ್ನು ಧರಿಸಿ ಉಸಿರಾಟದ ತೊಂದರೆ ಚಿಹ್ನೆಗಳನ್ನು ತೋರಿಸುತ್ತಿರುವವರಿಗೆ ಸಹಾಯ ಮಾಡುವುದನ್ನು ಕಾಣಬಹುದು.