ಪಾಟ್ನಾ: ಬಿಹಾರದ ಹಜಾರಿಬಾಗ್‌ನಲ್ಲಿ ಬುಧವಾರ ಬೆಳಿಗ್ಗೆ ಬಸ್ಸೊಂದು ರಸ್ತೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದು, 12 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಬೆಳಗಿನ ಜಾವ 4 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 33ರ ಚಾರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ಪ್ರಪ್ಪಿದ ಪರಿಣಾಮ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 


ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರಲ್ಲಿ ಗಂಭೀರ ಸ್ಥಿತಿಯಲ್ಲಿರುವ ಐವರನ್ನು ರಾಂಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ನಳಂದದ ಪಟೇಲ್ ನಗರದಿಂದ 'ಮುಂಡನ್' ಸಮಾರಂಭಕ್ಕಾಗಿ ರಾಜರಪ್ಪಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. 


ಹಜಾರಿಬಾಗ್ ಪೊಲೀಸರು ಮತ್ತು ಸ್ಥಳೀಯ ಆಡಳಿತದ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.