ಕೊಯಂಬತ್ತೂರು : ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ಶುಕ್ರವಾರ ತಡರಾತ್ರಿ ಒಂದು ಹೆಣ್ಣಾನೆ (Eleohant death) ಮತ್ತು ಅದರ ಎರಡು ಪುಟ್ಟ ಹೆಣ್ಣು ಮರಿಗಳು ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ (Train accident) ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ.
ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ 25 ವರ್ಷದ ಹೆಣ್ಣಾನೆ ಹಾಗೂ ಅದರ 12 ವರ್ಷದ ಎರಡು ಮರಿಗಳು (elephant) ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್ (Mangaluru-Chennai Express) ರೈಲು ಡಿಕ್ಕಿ ಹೊಡೆದಿದೆ. ಮಂಗಳೂರು–ಚೆನ್ನೈ ಎಕ್ಸಪ್ರೆಸ್ ರೈಲು ಕೇರಳದ ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಮಾರ್ಗವಾಗಿ ಚೆನ್ನೈಗೆ ತೆರಳುತ್ತದೆ.
ಇದನ್ನೂ ಓದಿ : ಹೊಸ ರೂಪಾಂತರಿ ಕರೋನಾದಿಂದ ಹೆಚ್ಚಿದ ಆತಂಕ , ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ
ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ರಾತ್ರಿ ವೇಳೆಯೇ ಆನೆಗಳ (elephant death) ಮೃತದೇಹಗಳನ್ನು ಹಳಿಯ ಮೇಲಿನಿಂದ ತೆಗೆಯಲಾಗಿದೇ. ಇಂದು ಪೋಸ್ಟ್ಮಾರ್ಟಮ್ ಮಾಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈಲಿನ ಲೋಕೋ ಪೈಲಟ್ ನೀಡಿದ ಮಾಹಿತಿ ಅನ್ವಯ ರೈಲ್ವೆ ಪೊಲೀಸರೂ (railway police) ಸ್ಥಳಕ್ಕೆ ತೆರಳಿ, ಪರಿಶೀಲಿಸಿದ್ದಾರೆ.
ಈ ವರ್ಷದ ಮಾರ್ಚ್‌ನಲ್ಲಿ, 25 ವರ್ಷದ ಗಂಡು ಆನೆಯು ಅಂತಾರಾಜ್ಯ ಗಡಿಗೆ ಸಮೀಪವಿರುವ ಮಧುಕ್ಕರೈ ಅರಣ್ಯ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶದ ಹೊರಗೆ ರೈಲಿಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿತು ಮತ್ತು ನಂತರ ಸಾವನ್ನಪ್ಪಿತು. ಕೊಯಂಬತ್ತೂರು ಬಳಿ ಇತ್ತೀಚೆಗೆ ಆನೆಗಳ ಅಸಹಜ ಸಾವು ಹೆಚ್ಚುತ್ತಿದ್ದು, ಇದು ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ : Coronavirus Updates:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,318 ಹೊಸ COVID-19 ಪ್ರಕರಣಗಳು ದಾಖಲು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.