ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರು ನಕಲಿ ಸಿಬಿಐ ಅಧಿಕಾರಿಗಳ ಬಂಧನ!!

Fake CBI officers arrested in Bihar: ಈ ಮೂವರು ಆರೋಪಿಗಳು ತಮ್ಮನ್ನು ಸಿಬಿಐ ಅಧಿಕಾರಿಗಳು ಎಂದು ಹೇಳಿಕೊಳ್ಳುತ್ತಿದ್ದರು. ತಾವು ಸಿಬಿಐ ಅಧಿಕಾರಿಗಳೆಂದು ಸಾಮಾನ್ಯ ಜನರಿಂದ ಹಣ ಸುಲಿಗೆ ಮಾಡುತ್ತಿದ್ದರು ಎಂದು ಪ್ರಕರಣದ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

Written by - Puttaraj K Alur | Last Updated : May 19, 2025, 06:27 PM IST
  • ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರು ನಕಲಿ ಸಿಬಿಐ ಅಧಿಕಾರಿಗಳ ಬಂಧನ!!
  • ಬಿಹಾರದ ಪಾಟ್ನಾದಲ್ಲಿ CBI ಅಧಿಕಾರಿಗಳು ಎಂದು ವಂಚಿಸುತ್ತಿದ್ದ ಆರೋಪಿಗಳು
  • ಆರೋಪಿಗಳಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಂಡಿರುವ ಪೊಲೀಸರು
ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರು ನಕಲಿ ಸಿಬಿಐ ಅಧಿಕಾರಿಗಳ ಬಂಧನ!!

Fake CBI officer: ಕೆಲವು ದಿನಗಳ ಹಿಂದೆ ಬಿಹಾರದಲ್ಲಿ ನಕಲಿ ಪೊಲೀಸ್ ಅಧಿಕಾರಿಯೊಬ್ಬರ ಘಟನೆ ಬೆಳಕಿಗೆ ಬಂದಿತ್ತು. ಇದೀಗ ಪಾಟ್ನಾದಲ್ಲಿಯೂ ನಕಲಿ ಸಿಬಿಐ ಅಧಿಕಾರಿಗಳಿಗೆ ಸಂಬಂಧಿಸಿದ ಪ್ರಕರಣವೂಂದು ಬೆಳಕಿಗೆ ಬಂದಿದೆ. ನಕಲಿ ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ಸಂಘಟಿತ ಗ್ಯಾಂಗ್ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರೆಲ್ಲರನ್ನೂ ಪೊಲೀಸರು ವಿವಿಧ ಸ್ಥಳಗಳಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಎಲ್ಲಾ ಆರೋಪಿಗಳು ತಮ್ಮನ್ನು ಕೇಂದ್ರ ತನಿಖಾ ದಳದ (CBI) ಅಧಿಕಾರಿಗಳು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದರು. ಆರೋಪಿಗಳು ಸಾಮಾನ್ಯ ಜನರನ್ನು ಬೆದರಿಸುವ ಮೂಲಕ ಹಣ ಸುಲಿಗೆ ಮಾಡುತ್ತಿದ್ದರು. ಬಂಧಿತ ಆರೋಪಿಗಳು ದರೋಡೆ ಮತ್ತು ಡಕಾಯಿತಿಯಂತಹ ಘಟನೆಗಳಲ್ಲಿಯೂ ಭಾಗಿಯಾಗಿರುವುದು ಖಾಕಿ ವಿಚಾರಣೆ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಪರ ಗೂಢಚರ್ಯೆ ಮಾಡಲು ಯುಟ್ಯೂಬರ್ ಜ್ಯೋತಿಯನ್ನೇ ಆಯ್ಕೆ ಮಾಡಿದ್ದು ಯಾಕೆ ಪಾಕಿಸ್ತಾನ ? ಇದೊಂದು ವಿಡಿಯೋ ಸಾಕು ಎಲ್ಲವೂ ಸ್ಪಷ್ಟವಾಗುತ್ತದೆ !

ಶಸ್ತ್ರಾಸ್ತ್ರಗಳು ವಶಕ್ಕೆ

ನಕಲಿ ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅನ್ನು ಪಾಟ್ನಾ ಪೊಲೀಸರು ಭೇದಿಸಿದ್ದಾರೆ. ಈ ಗ್ಯಾಂಗ್‌ನ ಮೂವರು ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಈ ಮೂವರು ಆರೋಪಿಗಳು ತಮ್ಮನ್ನು ಸಿಬಿಐ ಅಧಿಕಾರಿಗಳು ಎಂದು ಹೇಳಿಕೊಳ್ಳುತ್ತಿದ್ದರು. ತಾವು ಸಿಬಿಐ ಅಧಿಕಾರಿಗಳೆಂದು ಸಾಮಾನ್ಯ ಜನರಿಂದ ಹಣ ಸುಲಿಗೆ ಮಾಡುತ್ತಿದ್ದರು. ಈ ಮೂವರು ಆರೋಪಿಗಳಿಂದ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಅವರ ಬಳಿ ಎರಡು ಪಿಸ್ತೂಲ್‌ಗಳು, ಮೂರು ಕಾರ್ಟ್ರಿಡ್ಜ್‌ಗಳು, ಆರು ಮೊಬೈಲ್ ಫೋನ್‌ಗಳು, ಸೇನಾ ಸಮವಸ್ತ್ರ ಮತ್ತು ನಕಲಿ ಸಿಬಿಐ ಗುರುತಿನ ಚೀಟಿಗಳನ್ನ ವಶಪಡಿಸಿಕೊಳ್ಳಲಾಗಿದೆ.

ಬಲವಂತದಿಂದ ಹಣ ವಸೂಲಿ  

ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡ ಈ ಆರೋಪಿಗಳ ವಿರುದ್ಧ ಈಗಾಗಲೇ ದರೋಡೆ ಮತ್ತು ಡಕಾಯಿತಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಮೂವರು ಆರೋಪಿಗಳನ್ನು ಸಹ ಗುರುತಿಸಲಾಗಿದೆ. ಮೂವರು ಆರೋಪಿಗಳಾದ ರಿತನ್ ಕುಮಾರ್ ಸಿಂಗ್, ಅರವಿಂದ್ ಕುಮಾರ್ ಮತ್ತು ನಿತೀಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಪಾಟ್ನಾ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, "ಶನಿವಾರ ಪಾಟ್ನಾದ ವಿವಿಧ ಸ್ಥಳಗಳಿಂದ ಮೂವರನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಅವರು ಜನರಿಂದ ಹಣ ಸುಲಿಗೆ ಮಾಡಲು ಸಿಬಿಐ ಅಧಿಕಾರಿಗಳಂತೆ ನಟಿಸುತ್ತಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಾಕ್ ಗೆ ಗೌಪ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಉತ್ತರಪ್ರದೇಶದ ವ್ಯಕ್ತಿ ಬಂಧನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Trending News