Ayodhya Tragedy: ಅಯೋಧ್ಯೆಯಲ್ಲಿ ಮೊದಲ ದುರಂತ... ಸರಯೂ ನದಿಯಲ್ಲಿ ಮುಳುಗಿ ಮೂವರು ಸಾವು

Ayodhya Latest News : ಇತ್ತೀಚೆಗಷ್ಟೇ ಅಯೋಧ್ಯೆ ಶ್ರೀರಾಮನ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದೆ. ಪುಣ್ಯಸ್ನಾನಕ್ಕೆಂದು ನದಿಗಿಳಿದ ಮೂವರು ಭಕ್ತರು ಸಾವನ್ನಪ್ಪಿದ್ದಾರೆ. 

Written by - Chetana Devarmani | Last Updated : Mar 11, 2024, 08:21 AM IST
  • ಅಯೋಧ್ಯೆ ಶ್ರೀರಾಮನ ದೇವಸ್ಥಾನ
  • ಸರಯೂ ನದಿಯಲ್ಲಿ ಮುಳುಗಿ ಮೂವರು ಸಾವು
  • ಶ್ರೀರಾಮನ ದೇವಸ್ಥಾನದ ಬಳಿ ದುರಂತ
Ayodhya Tragedy: ಅಯೋಧ್ಯೆಯಲ್ಲಿ ಮೊದಲ ದುರಂತ... ಸರಯೂ ನದಿಯಲ್ಲಿ ಮುಳುಗಿ ಮೂವರು ಸಾವು title=

ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ನಂತರ ಮೊದಲ ಬಾರಿಗೆ ದುರಂತವೊಂದು ನಡೆದಿದೆ. ದೇವಸ್ಥಾನದ ಬಳಿಯಲ್ಲಿ ಇರುವ ಸರಯೂ ನದಿಯಲ್ಲಿ ಪುಣ್ಯಸ್ನಾನ ಮಾಡಲು ತೆರಳಿದ್ದ ಮೂವರು ಯುವಕರು ಕೊಚ್ಚಿಕೊಂಡು ಹೋಗಿದ್ದಾರೆ. ಅಯೋಧ್ಯೆಯ ಸರಯೂ ನದಿಯಲ್ಲಿ ಮುಳುಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.  

ರವಿ ಮಿಶ್ರಾ (20), ಹರ್ಷಿತ್ ಅವಸ್ಥಿ (18) ಮತ್ತು ಉತ್ತರ ಪ್ರದೇಶದ ಕಾನ್ಪುರದ ಪ್ರಿಯಾಂಶು ಸಿಂಗ್ (16) ಮೂವರು ಮೃತ ದುರ್ದೈವಿಗಳು. ಭಾನುವಾರ ರಜೆ ಇದ್ದ ಕಾರಣ ಬಾಲರಾಮನ ದರ್ಶನಕ್ಕೆ ಅಯೋಧ್ಯೆಗೆ ಬಂದಿದ್ದರು. ಭಾನುವಾರ ಮಧ್ಯಾಹ್ನ ಸರಯೂ ನದಿಯಲ್ಲಿ ಸ್ನಾನ ಮಾಡಲು ಇಳಿದಿದ್ದರು. ಆದರೆ ನದಿಯ ಸೆಳೆತಕ್ಕೆ ಸಿಲುಕಿ ಮೂವರೂ ಕೊಚ್ಚಿಕೊಂಡು ಹೋಗಿದ್ದಾರೆ. ಯುವಕರು ನೀರಿನಲ್ಲಿ ಮುಳುಗುತ್ತಿದ್ದಂತೆ ಸ್ಥಳೀಯರು ಕೂಡಲೇ ರಕ್ಷಿಸಲು ಯತ್ನಿಸಿದರು. ಆದರೆ ಪ್ರಯತ್ನ ವಿಫಲವಾಗಿದೆ. 

ಇದನ್ನೂ ಓದಿ: ಬೆಂಗಳೂರು-ಚೆನ್ನೈ ನಡುವೆ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ

ಸರಯೂ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಯುವಕರಿಗೆ ಈಜಲು ಬಾರದಿರುವುದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. 

ಅಯೋಧ್ಯೆಯಲ್ಲಿ ದರ್ಶನಕ್ಕೆಂದು ತೆರಳಿದ್ದ ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖ ಮುಗಿಲು ಮುಟ್ಟಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  

ಇದನ್ನೂ ಓದಿ: ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News