ನವದೆಹಲಿ: ಮದ್ಯದ ಅಮಲಿನಲ್ಲಿ ರೈಲ್ವೆ ಹಳಿಯ ಮೇಲೆ ಕುಳಿತಿದ್ದ ಮೂವರು ವ್ಯಕ್ತಿಗಳ ಮೇಲೆ ರೈಲು ಚಲಿಸಿದ ಕಾರಣ ಅವರು ಸಾವನ್ನಪ್ಪಿದ ಧಾರುಣ ಘಟನೆ ಸೋಮವಾರ ಬೆಳಿಗ್ಗೆ 7.30ರ ಸಮಯದಲ್ಲಿ ನಂಗ್ಲೋಯ್ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.


COMMERCIAL BREAK
SCROLL TO CONTINUE READING

ಘಟನೆ ಬಗ್ಗೆ ಮಾಹಿತಿ ನೀಡಿದ ಉತ್ತರ ರೈಲ್ವೆ ವಕ್ತಾರ ದೀಪಕ್ ಕುಮಾರ್, "ಬೆಳಿಗ್ಗೆ 7.30ರ ಸಮಯದಲ್ಲಿ ಈ ದುರಂತ ಸಂಭವಿಸಿದೆ. ನಂಗ್ಲೋಯ್ ಪ್ರದೇಶದಲ್ಲಿ ಮದ್ಯದ ಅಮಲಿನಲ್ಲಿ ರೈಲ್ವೆ ಹಳಿ ಮೇಲೆ ಕುಳಿತಿದ್ದ ಮೂವರ ಮೇಲೆ ಬಿಕನೇರ್-ದೆಹಲಿ ಎಕ್ಸ್ ಪ್ರೆಸ್ ರೈಲು ಹರಿದ ಪರಿಣಾಮ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದಿದ್ದಾರೆ.


ಇದುವರೆಗೂ ಮೃತರ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.