ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸುಪ್ರೀಂಕೋರ್ಟ್ ಕೊಲಿಜಿಯಂ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ನ್ಯಾಯಾಧೀಶರ ನೇಮಕಕ್ಕಾಗಿ ಒಂಬತ್ತು ಹೆಸರುಗಳನ್ನು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಈ ಪಟ್ಟಿಯಲ್ಲಿ ಮೂವರು ಮಹಿಳಾ ನ್ಯಾಯಾಧೀಶರಿದ್ದಾರೆ, ಒಬ್ಬರು ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶರಾಗಬಹುದು ಎನ್ನಲಾಗುತ್ತಿದೆ.


ಇದನ್ನೂ ಓದಿ: Chief Justice Of India: ಚರ್ಚೆಯೇ ಇಲ್ಲದೆ ಸಂಸತ್ತಿನಲ್ಲಿ ಕಾನೂನಿನ ಅಂಗೀಕಾರ, ಇಂತಹ ಕಾನೂನುಗಳಲ್ಲಿ ಸ್ಪಷ್ಟತೆಯ ಕೊರತೆ ಎಂದ CJI


ಕೊಲಿಜಿಯಂ, ಮೊದಲ ಬಾರಿಗೆ ಮೂವರು ಮಹಿಳಾ ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ ಎನ್ನಲಾಗಿದೆ.ಇದರಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ ವಿ ನಾಗರತ್ನ; ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ,; ಮತ್ತು ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ. ಇದರಲ್ಲಿ ನ್ಯಾಯಮೂರ್ತಿ ನಾಗರತ್ನ ಅವರು ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಬಹುದು ಎನ್ನಲಾಗುತ್ತಿದೆ.


ಇದನ್ನೂ ಓದಿ: SC On Women In NDA : ಮಹಿಳೆಯರೂ ಕೂಡ NDA ಪರೀಕ್ಷೆ ಬರೆಯಬಹುದು, ಸೇನೆಯ ನಿಯಮ ತಾರತಮ್ಯದಿಂದ ಕೂಡಿದೆ ಎಂದ ಸುಪ್ರೀಂ


ನ್ಯಾಯಮೂರ್ತಿ ರೋಹಿಂಟನ್ ನಾರಿಮನ್ ಅವರು ಸುಪ್ರೀಂಕೋರ್ಟ್‌ (Supreme Court) ನಿಂದ ನಿವೃತ್ತರಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಬಂದಿದೆ.ನ್ಯಾಯಮೂರ್ತಿ ನಾರಿಮನ್ ಅವರು ಮಾರ್ಚ್ 2019 ರಿಂದ ಕೊಲಿಜಿಯಂ ಸದಸ್ಯರಾಗಿದ್ದರು, ಹೈಕೋರ್ಟ್ ನ್ಯಾಯಾಧೀಶರಿಗಾಗಿ ಅಖಿಲ ಭಾರತ ಹಿರಿಯರ ಪಟ್ಟಿಯಲ್ಲಿರುವ ಇಬ್ಬರು ಹಿರಿಯ ನ್ಯಾಯಾಧೀಶರು ಹೊರತು ಹೆಸರುಗಳ ಬಗ್ಗೆ ಯಾವುದೇ ಒಮ್ಮತ ಮೂಡಲು ಸಾಧ್ಯವಿಲ್ಲ ಎಂದು ತಮ್ಮ ನಿಲುವಿನಲ್ಲಿ ದೃಢವಾಗಿದ್ದರು.


ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ತ್ರಿಪುರಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಕಿಲ್ ಕುರೇಶಿ ಅವರನ್ನು ಮೊದಲು ಶಿಫಾರಸು ಮಾಡಲಾಗಿತ್ತು.


ಇದನ್ನೂ ಓದಿ : Indian Idol 12 Winner: ಪವನ್ ದೀಪ್ ರಾಜನ್ ಮುಡಿಗೆ ಇಂಡಿಯನ್ ಐಡಲ್ 12 ಪ್ರಶಸ್ತಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ