ಪ್ರಧಾನಿ ಮೋದಿ ಹಾಗೂ ವಿಜಯ್ ವರ್ಗಿಯಾ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯವರ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಟಿಎಂಸಿ ಬುಧವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯವರ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಟಿಎಂಸಿ ಬುಧವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಇದನ್ನೂ ಓದಿ: Election Commission: ಪಂಚರಾಜ್ಯಗಳ ಚುನಾವಣೆ ದಿನಾಂಕ ಪ್ರಕಟ: ಇಲ್ಲಿದೆ ಫುಲ್ ಮಾಹಿತಿ!
'ನಿನ್ನೆ, ಕೈಲಾಶ್ ವಿಜಯವರ್ಗಿಯಾ ಕಾರ್ಯಕ್ರಮವೊಂದಕ್ಕೆ ಹೋಗಿ ಸ್ಟೈಫಂಡ್ ಘೋಷಿಸಿದ್ದನ್ನು ನಾನು ನೋಡಿದೆ.ಯಾರಾದರೂ ಅಂತಹ ಘೋಷಣೆ ಮಾಡುವುದು ಹೇಗೆ? ನಾವು ಇದನ್ನು ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ. ಚುನಾವಣಾ ಆಯೋಗ (Election Commission) ವು ಬಿಜೆಪಿಯಿಂದ ಪ್ರಭಾವಿತವಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ ”ಎಂದು ಮುಖ್ಯ ಚುನಾವಣಾ ಅಧಿಕಾರಿಯನ್ನು ಭೇಟಿಯಾದ ನಂತರ ಟಿಎಂಸಿ ನಾಯಕ ಫಿರ್ಹಾದ್ ಹಕೀಮ್ ಹೇಳಿದ್ದಾರೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ ಸೇರಿ ಪಂಚ ರಾಜ್ಯಗಳ ಚುನಾವಣೆಗೆ ಇಂದು ದಿನಾಂಕ ಪ್ರಕಟ
ಮಂಗಳವಾರ ಕೋಲ್ಕತ್ತಾದ ಶಾಹಿದ್ ಮಿನಾರ್ ಮೈದಾನದಲ್ಲಿ ನಡೆದ ಕೀರ್ತನ್ ಗಾಯಕರ ಸಮಾವೇಶದಲ್ಲಿ ವಿಜಯವರ್ಗಿಯ ಅವರು ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅವರ ಪಕ್ಷ ಕೀರ್ತನ್ ಗಾಯಕರಿಗೆ ಪಿಂಚಣಿ ವ್ಯವಸ್ಥೆ ಮಾಡುವುದಾಗಿ ಘೋಷಿಸಿತ್ತು. "ಬಿಜೆಪಿ ಸರ್ಕಾರ ನಿಮಗಾಗಿ ಪಿಂಚಣಿ ವ್ಯವಸ್ಥೆ ಮಾಡುತ್ತದೆ, ಮತ್ತು ನೀವೆಲ್ಲರೂ ಕೀರ್ತನೆಗಳನ್ನು ನಡೆಸಲು, ಯಾವುದೇ ಚಿಂತೆ ಇಲ್ಲದೆ ಭಜನೆಗಳನ್ನು ಹಾಡಲು ಸಾಧ್ಯವಾಗುತ್ತದೆ" ಎಂದು ವಿಜಯವರ್ಗಿಯಾ ಹೇಳಿದ್ದರು.
ವಿವಿಧ ಕೇಂದ್ರ ಯೋಜನೆಗಳ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಬಳಸುವುದು ಮತ್ತು ಕೇಂದ್ರ ಆರೋಗ್ಯ ಸಚಿವಾಲಯ ವಿತರಿಸಿದ ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿವೆ ಎಂದು ಟಿಎಂಸಿ ನಿಯೋಗ ಆರೋಪಿಸಿದೆ.
ಇದನ್ನೂ ಓದಿ: PM Modi: ಐದು ರಾಜ್ಯಗಳ ವಿಧಾನಸಭೆ ಎಲೆಕ್ಷನ್ ದಿನಾಂಕ ಬಗ್ಗೆ ಸುಳಿವು ನೀಡಿದ ಪ್ರಧಾನಿ ಮೋದಿ!
ಈ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ. ರಾಜಕಾರಣಿಯಾಗಿ ಅವರು ರ್ಯಾಲಿಗಳಲ್ಲಿ ತಮ್ಮ ಪಕ್ಷಕ್ಕೆ ಬೆಂಬಲ ಕೋರಿದ್ದಾರೆ. ಈ ಪರಿಸ್ಥಿತಿಯಲ್ಲಿ, ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಅವರ ಫೋಟೋವನ್ನು ಬಳಸುವುದು ಮತದಾರರ ಮೇಲೆ ಪ್ರಭಾವ ಬೀರುತ್ತದೆ ಮತ್ತು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ”ಎಂದು ಟಿಎಂಸಿ ದೂರಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.