ಹೂಗ್ಲಿ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಬಂಡೆಲ್ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ನೀತು ರಾಮ್ ಅವರ ಪತಿ ದಿಲೀಪ್ ರಾಮ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಶನಿವಾರ ಗುಂಡಿಕ್ಕಿ ಕೊಂದಿದ್ದಾರೆ.ರೈಲ್ವೆ ನಿಲ್ದಾಣದ ಐದನೇ ಪ್ಲಾಟ್ಫಾರ್ಮ್ನಲ್ಲಿ ಈ ಘಟನೆ ಸಂಭವಿಸಿದೆ.
ಗುಂಡು ಹಾರಿಸಿದ ನಂತರ ಗಂಭೀರ ಸ್ಥಿತಿಯಲ್ಲಿದ್ದ ದಿಲೀಪ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಈಗ ಈ ಕೊಲೆಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಟಿಎಂಸಿ ಆರೋಪಿಸಿ ಚುಂಚುರಾದಲ್ಲಿ 24 ಗಂಟೆಗಳ ಬಂದ್ ಕರೆ ನೀಡಿದೆ.ಜೂನ್ ಆರಂಭದಲ್ಲಿ ಸ್ಥಳೀಯ ಟಿಎಂಸಿ ನಾಯಕ ನಿರ್ಮಲ್ ಕುಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಿಮ್ಟಾದಲ್ಲಿ ಅಪರಿಚಿತ ದಾಳಿಕೊರರಿಂದಾಗಿ ಸಾವನ್ನಪ್ಪಿದ್ದರು. ಇನ್ನು ಮೇ ತಿಂಗಳಲ್ಲಿ, ಬಿಜೆಪಿ ಕಾರ್ಯಕರ್ತ ಚಂದನ್ ಸಾ ಅವರನ್ನು ಉತ್ತರ 24 ಪರಗಣ ಜಿಲ್ಲೆಯ ಭಟ್ಪಾರದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು.
ಹೂಗ್ಲಿ, ಭಟ್ಪಾರಾ, ಮತ್ತು ಕಂಕಿನಾರಾ ಸೇರಿದಂತೆ ಪಶ್ಚಿಮ ಬಂಗಾಳದ ಹಲವಾರು ಭಾಗಗಳು ಟಿಎಂಸಿ ಮತ್ತು ಬಿಜೆಪಿ ನಡುವೆ ಮತದಾನದ ನಂತರದ ಹಿಂಸಾಚಾರಕ್ಕೆ ಸಾಕ್ಷಿಯಾಗಿವೆ ಎನ್ನಲಾಗಿದೆ.