ಕೋಲ್ಕತ್ತಾ: ಮುಂಬರುವ ವಿಧಾನಸಭೆ ಚುನಾವಣೆಗೆ ಪಶ್ಚಿಮ ಬಂಗಾಳ ಸಜ್ಜಾಗುತ್ತಿದೆ. ಒಟ್ಟು 294 ಸೀಟುಗಳಿಗೆ ಚುನಾವಣೆ ನಡೆಯುತ್ತಿದ್ದು, ಈ ಬಾರಿ ಆಡಳಿತದಲ್ಲಿರುವ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.


COMMERCIAL BREAK
SCROLL TO CONTINUE READING

ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯನ್ನು ಮಣಿಸಲು ಬಿಜೆಪಿ(BJP) ಭರ್ಜರಿ ಪ್ಲಾನ್‌ಗಳನ್ನು ಮಾಡಿಕೊಳ್ಳುತ್ತಿದೆ. ಅದರಲ್ಲೂ ಟಿಎಂಸಿಯ ಕೆಲ ನಾಯರುಗಳು ಬಿಜೆಪಿ ಸೇರಿದ್ದು, ದೀದಿಗೆ ಆರಂಭಿಕ ಆಘಾತವಾಗಿದೆ.


Fact Check: ನಿರುದ್ಯೋಗಿಗಳಿಗೆ Modi Government ನೀಡಲಿದೆಯೇ 3800 ರೂ. ಭತ್ಯೆ, ಇಲ್ಲಿದೆ ಫ್ಯಾಕ್ಟ್ ಚೆಕ್


ಇತ್ತೀಚೆಗಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮಮತಾ ಬ್ಯಾನರ್ಜಿ ಸಂಪುಟದಿಂದ ಹೊರಬಂದಿದ್ದ ಟಿಎಂಸಿ ಹಿರಿಯ ಮುಖಂಡ ರಾಜೀಬ್ ಬ್ಯಾನರ್ಜಿ ಅವರು ಶುಕ್ರವಾರ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.


Pension: ಕೇಂದ್ರ ಸರ್ಕಾರದ ನೌಕರರಿಗೆ, ಪಿಂಚಣಿದಾರರಿಗೆ 'ಭರ್ಜರಿ ಗುಡ್ ನ್ಯೂಸ್'..!


ಡೊಮ್ಜೂರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಜೀಬ್ ಬ್ಯಾನರ್ಜಿ ಅವರು ಇಂದು ವಿಧಾನಸಭೆ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.


ಫೆ.೧ ರಿಂದ ಮುಂಬೈ ಲೋಕಲ್ ಟ್ರೈನ್ ಗಳು ಸಾರ್ವಜನಿಕರಿಗೆ ಮುಕ್ತ


ಬಳಿಕ ಪ್ರತಿಕ್ರಿಯಿಸಿರುವ ಅವರು, ನಾನು ರಾಜ್ಯ ವಿಧಾನಸಭೆಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಸಲ್ಲಿಸಿದ್ದೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ನನ್ನ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.


ಶಶಿ ತರೂರ್ ಹಾಗೂ ಆರು ಪತ್ರಕರ್ತರ ವಿರುದ್ಧ ದೇಶ ದ್ರೋಹದ ಕೇಸ್ ದಾಖಲು


ಮುಂದಿನ ದಿನಗಳಲ್ಲಿ, ನಾನು ಡೊಮ್ಜೂರ್ ಕ್ಷೇತ್ರದ ಜನರ ಸೇವೆಯನ್ನು ಮುಂದುವರಿಸುತ್ತೇನೆ ಎಂದಿರುವ ಅವರು ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ತಿಳಿಸಿಲ್ಲ. ಇದರಿಂದ ರಾಜೀಬ್ ಬ್ಯಾನರ್ಜಿ ಅವರ ಮುಂದಿನ ರಾಜಕೀಯ ನಡೆ ಕುತೂಹಲ ಮೂಡಿಸಿದೆ.


"ಈ ಎರಡು ರಾಜ್ಯಗಳಲ್ಲಿ ಇನ್ನೂ 40 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿವೆ"


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.