ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ. 91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಎಪ್ರಿಲ್ 11ರಂದು ಮತದಾನ ನಡೆಯಲಿದೆ. ಇದರಲ್ಲಿ ಆಂಧ್ರಪ್ರದೇಶದ 25, ತೆಲಂಗಾಣದ 17, ಉತ್ತರಪ್ರದೇಶದ 8, ಉತ್ತರಾಖಂಡದ 5, ಮಹಾರಾಷ್ಟ್ರದ 7 ಕ್ಷೇತ್ರಗಳು ಸೇರಿವೆ.


COMMERCIAL BREAK
SCROLL TO CONTINUE READING

ಲೋಕಸಭೆ ಚುನಾವಣೆ 2019 ರ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿರುವುದರಿಂದ ಹಲವು ಪ್ರಮುಖ ನಾಯಕರು ಇಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.


ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗ್ಪುರ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಮತ್ತೊಂದೆಡೆ ಸೋಲಾಪುರ ಕ್ಷೇತ್ರದಿಂದ ಹಿಂದುಳಿದ ಬಹುಜನ ನಾಯಕ ಪ್ರಕಾಶ್ ಅಂಬೇಡ್ಕರ್ ಅವರ ನಾಮಪತ್ರ ಸಲ್ಲಿಸಿದ್ದಾರೆ. ಇದಲ್ಲದೆ ಉತ್ತರ ಪ್ರದೇಶದ ಮಥುರಾದಿಂದ ಬಿಜೆಪಿ ಅಭ್ಯರ್ಥಿ ಹೇಮಾ ಮಾಲಿನಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಮಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿರುತ್ತಾರೆ.


ಎಸ್​ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಅಜಂಗಢ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ರಾಷ್ಟ್ರೀಯ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ಶ್ರೀನಗರ ಲೋಕಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಫತೇಪುರ್ ಸಿಕ್ರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರೆ, ಬಿಜೆಪಿ ನಾಯಕ ವಿ.ಕೆ. ಸಿಂಗ್ ಘಜಿಯಾಬಾದ್ನಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿಹಾರದ ಜಾಮುಯಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚಿರಾಗ್ ಪಾಸ್ವಾನ್  ನಾಮಪತ್ರ ಸಲ್ಲಿಸಲಿದ್ದಾರೆ.