ಜಮ್ಮು-ಕಾಶ್ಮೀರ: ರಾಷ್ಟ್ರೀಯ ಪಂಚಾಯತ್​​ ರಾಜ್​ ದಿವಸ್​ ಅಂಗವಾಗಿ ಇಂದು ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 20,000 ಕೋಟಿಗೂ ಅಧಿಕ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: PM Narendra Modi : ಪ್ರಧಾನಿ ಮೋದಿಗೆ 'ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ'


ದೇಶದ ಪಂಚಾಯತ್​​ಗಳನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಅಮೃತ್ ಸರೋವರ ಎಂಬ ಹೊಸ ಉಪಕ್ರಮವನ್ನು ಸಹ ಪ್ರಾರಂಭಿಸಲಿದ್ದಾರೆ. ಇದು ದೇಶದ ಪ್ರತಿ ಜಿಲ್ಲೆಯಲ್ಲಿ 75 ಜಲಮೂಲಗಳನ್ನು ಪುನರುಜ್ಜೀವನಗೊಳಿಸುವ ಗುರಿಯನ್ನು ಹೊಂದಿದೆ.


ಇನ್ನು ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, "ಜಲಮೂಲಗಳನ್ನು ಪುನರುಜ್ಜೀವನಗೊಳಿಸುವ ಮತ್ತು ಪ್ರತಿ ಹನಿ ನೀರನ್ನು ಸಂರಕ್ಷಿಸುವ ಪ್ರಯತ್ನಗಳಲ್ಲಿ ವಿಶೇಷ ಕ್ಷಣವನ್ನು ಗುರುತಿಸುವ ಅಮೃತ ಸರೋವರ ಕಾರ್ಯಕ್ರಮವನ್ನು ಉದ್ಘಾಟಿಸಲು ನಾನು ಉತ್ಸುಕನಾಗಿದ್ದೇನೆ. ಈ ಕಾರ್ಯಕ್ರಮದ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ 75 ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಪುನರುಜ್ಜೀವನಗೊಳಿಸಲಾಗುವುದು" ಎಂದು ಹೇಳಿದ್ದಾರೆ. 


ಇದನ್ನು ಓದಿ: ಪ್ರಜಾಪ್ರಭುತ್ವ ಮತ್ತು ವೈವಿದ್ಯತೆಯ ಕುರಿತ ಪಾಠಗಳನ್ನು ತೆಗೆದುಹಾಕಿದ ಸಿಬಿಎಸ್ಇ..!


ಉಗ್ರರ ಕರಿನೆರಳು: ಇನ್ನು ಜಮ್ಮು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಬೆನ್ನಲ್ಲೇ, ಜಲಾಲಾಬಾದ್​​ ಪ್ರದೇಶದಲ್ಲಿ ಎನ್​ಕೌಂಟರ್ ನಡೆದಿದೆ. ಈ ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನು ಸೇನೆ ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಸದ್ಯ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.