ಬೆಂಗಳೂರು: ಐತಿಹಾಸಿಕ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸರ್ವೋಚ್ಚ ನ್ಯಾಯಾಲಯ ಇಂದು ತೆರೆ ಎಳೆಯಲಿದೆ. ಅತ್ಯಂತ ನಿರ್ಣಾಯಕವೂ, ಮಹತ್ವವೂ ಆಗಿರುವ ಕಾವೇರಿ ವಿವಾದದ ತೀರ್ಪು ಹೊರಬೀಳಲೀಗ ಕ್ಷಣಗಣನೆ ಆರಂಭವಾಗಿದೆ.  ಈ ಹಿನ್ನೆಲೆಯಲ್ಲಿ ಎಲ್ಲಿಯೂ ಕಾನೂನು ಸುವ್ಯವಸ್ಥೆ ಹದಗೆಡಂತೆ ಮುನ್ನೆಚ್ಚರಿಕೆ ವಹಿಸಲು ರಾಜ್ಯದಲ್ಲಿ ಮಧ್ಯರಾತ್ರಿಯಿಂದಲೇ ಹೈ ಅಲರ್ಟ್ ಜಾರಿಗೊಳಿಸಲಾಗಿದೆ.


COMMERCIAL BREAK
SCROLL TO CONTINUE READING

ಸುಪ್ರೀಂಕೋರ್ಟ್ ಕಾವೇರಿ ಜಲ ವಿವಾದ ಕುರಿತು ಇಂದು ಅಂತಿಮ ತೀರ್ಪು ಪ್ರಕತಿಸುವುದರಿಂದ ಮಧ್ಯರಾತ್ರಿಯಿಂದ ಸೂಕ್ತ ಸ್ಥಗಳಲ್ಲಿ ಭದ್ರತೆ ನಿಯೋಜನೆ ಮಾಡಲು ಸಿಎಂ ಸೂಚನೆ ತೀರ್ಪು ಯಾವುದೇ ರೀತಿ ಬಂದರೂ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. 


ಬೆಂಗಳೂರು ನಗರ, ಮಂಡ್ಯ, ಮೈಸೂರು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ವಹಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು  ಹಿರಿಯ ಅಧಿಕಾರಿಗಳಿಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ.


ಮಧ್ಯರಾತ್ರಿಯಿಂದಲೇ ಸೂಕ್ಷ್ಮ ಪ್ರದೇಶಗಳಲ್ಲಿ ಹೈ ಅಲರ್ಟ್ ಆಯೋಜಿಸಲಾಗಿದೆ. 15 ಸಾವಿರ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅಲ್ಲದೆ, ಕರ್ನಾಟಕ ರಾಜ್ಯ ರಿಸರ್ವ್ ಪೋಲೀಸ್ ಸಿಬ್ಬಂದಿ ಮತ್ತು ಇತರ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದು. ಹಿಂದಿನ ಗಲಭೆಗಳು ನಡೆದ ಸೂಕ್ಷ್ಮ ಪ್ರದೇಶಗಳಿಗೆ ವಿಶೇಷ ಗಮನ ನೀಡಲಾಗುವುದು ಎಂದು ಪೊಲೀಸ್ ಕಮೀಷನರ್ ಟಿ. ಸುನೀಲ್ ಕುಮಾರ್ ಹೇಳಿದರು.


ಈ ಹಿಂದೆ ಕಾವೇರಿ ಗಲಾಟೆಯಲ್ಲಿ ಗಿರಿನಗರ, ಬ್ಯಾಟರಾಯನಪುರ, ರಾಜಗೋಪಾಲನಗರ ಸೇರಿದಂತೆ ವಿವಿಧ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.