ಹಿಮಪಾತ: ಮನಾಲಿ-ಲೇಹ್ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ

ಹಿಮಪಾತದಿಂದಾಗಿ ರಾಣಿ ನಲ್ಲಾ ಮತ್ತು ರೋಹ್ತಂಗ್ ಪಾಸ್ ನಡುವಿನ ಮನಾಲಿ-ಲೇಹ್ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಕೀಲಾಂಗ್-ಮನಾಲಿ ಮಾರ್ಗದಲ್ಲಿ ಸಂಚರಿಸುವ ಬಸ್ಸುಗಳನ್ನು ತಡೆಹಿಡಿಯಲಾಗಿದೆ.
ನವದೆಹಲಿ: ಹಿಮಾಚಲ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಸೋಮವಾರ ಹಿಮಪಾತವಾಗಿದ್ದು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಹಿಮಪಾತದಿಂದಾಗಿ ರಾಣಿ ನಲ್ಲಾ ಮತ್ತು ರೋಹ್ತಂಗ್ ಪಾಸ್ ನಡುವಿನ ಮನಾಲಿ-ಲೇಹ್ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಕೀಲಾಂಗ್-ಮನಾಲಿ ಮಾರ್ಗದಲ್ಲಿ ಸಂಚರಿಸುವ ಬಸ್ಸುಗಳನ್ನು ತಡೆಹಿಡಿಯಲಾಗಿದೆ.
ಲಾಹೌಲ್-ಸ್ಪಿಟಿ ಮತ್ತು ಕುಲು ಜಿಲ್ಲೆಗಳ ಎತ್ತರದ ಪ್ರದೇಶಗಳಲ್ಲಿ ಇಂದು ಮುಂಜಾನೆ ಭಾರಿ ಹಿಮಪಾತವಾಗಿದೆ.
ಭಾನುವಾರ, ಸಿರ್ಮೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಎನ್ಎಚ್-707 ಅಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಕಳೆದ ಎರಡು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಹ ಅಸ್ತವ್ಯಸ್ತಗೊಂಡಿದೆ.
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ ಮತ್ತು ವಿದರ್ಭ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಭಾರಿ ಮಳೆಯಾಗಿದೆ.