Coromandel Express Accident: ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಜೆ ದೊಡ್ಡ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಲವಾರು ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರುವ ವರದಿಯಾಗಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಸಂಜೆ 6.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಈ ರೈಲು ಚೆನ್ನೈ ಸೆಂಟ್ರಲ್‌ನಿಂದ ಪಶ್ಚಿಮ ಬಂಗಾಳದ ಹೌರಾಕ್ಕೆ ಚಲಿಸುತ್ತಿತ್ತು ಎನ್ನಲಾಗಿದೆ. ಈ ರೈಲು ಮಧ್ಯಾಹ್ನ 3.15 ರ ಸುಮಾರಿಗೆ ಶಾಲಿಮಾರ್ ನಿಲ್ದಾಣದಿಂದ ಹೊರಟಿತ್ತು. ಆದರೆ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- New Parliament: ನೂತನ ಸಂಸತ್ ಭವನದಲ್ಲಿ ಅಖಂಡ ಭಾರತದ ನಕ್ಷೆ ಕಂಡು ಬೆಚ್ಚಿ ಬಿದ್ದ ಪಾಕಿಸ್ತಾನ, ಹೇಳಿದ್ದೇನು ಗೊತ್ತಾ?


ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ಬಾಲಾಸೋರ್‌ನ ಕಲೆಕ್ಟರ್‌ಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯವನ್ನು ಒದಗಿಸಲು ಸ್ಥಳಕ್ಕೆ ತಲುಪಲು ತಿಳಿಸಲಾಗಿದೆ. ಅಗತ್ಯವಿದ್ದರೆ SRC ಗೆ ಮಾನಿತಿಯನ್ನು ತಲುಪಿಸಲು ಸೂಚನೆ ನೀಡಲಾಗಿದೆ.


Mass Marriage: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಧುವಿನ ಮೇಕ್ ಅಪ್ ಬಾಕ್ಸ್ ನಲ್ಲಿ ಪತ್ತೆಯಾದ ಕಾಂಡೋಮ್, ಸಿಡಿಮಿಡಿಗೊಂಡ ಕಾಂಗ್ರೆಸ್


ಮೂಲಗಳ ಪ್ರಕಾರ ಗೂಡ್ಸ್ ರೈಲಿನ ಡಿಕ್ಕಿಯಿಂದಾಗಿ ರೈಲಿನ 17-18 ಬೋಗಿಗಳು ಹಳಿತಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮತ್ತು ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಾಹಿತಿ ಪ್ರಕಾರ, ಈ ಘಟನೆಯಲ್ಲಿ ಕತ್ತಲೆಯಿಂದಾಗಿ, ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯು ಭಾರಿ ಸವಾಲಿನ ಸಂಗತಿಯಾಗಿದೆ ಎನ್ನಲಾಗಿದೆ. ಜನರು ಫೋನ್‌ನಲ್ಲಿ ಫ್ಲ್ಯಾಷ್ ಅನ್ನು ಬೆಳಗಿಸುವ ಮೂಲಕ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ ಎನ್ನಲಾಗಿದೆ. ರೈಲಿನಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು ಎಂದು ಹೇಳಲಾಗುತ್ತಿದೆ. ಅಪಘಾತದ ನಂತರ ಹಲವು ಪ್ರಯಾಣಿಕರು ಸಿಲುಕಿಹಾಕಿಕೊಂಡಿರುವ ಆತಂಕವಿದೆ ಎನ್ನಲಾಗುತ್ತಿದೆ. ರೈಲು ಅಪಘಾತದ ಕುರಿತು ರೈಲ್ವೆ ತುರ್ತು ಸಂಖ್ಯೆಯನ್ನು ಸಹ ನೀಡಿದೆ, 6782262286 ಈ ಸಂಖ್ಯೆಗೆ ಕರೆ ಮಾಡುವ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು. 


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ