Pahalgam Terror Attack: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ನಲ್ಲಿ ಮಂಗಳವಾರ (ಏಪ್ರಿಲ್ 22, 2025) ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದ್ದು 28ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದೂ ಪ್ರವಾಸಿಗರನ್ನೆ ಗುರಿಯಾಗಿಸಿ ನಡೆಸಿರುವ ಈ ಉಗ್ರ ದಾಳಿಯ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪಣ ತೊತ್ತಿರುವ ಭಾರತೀಯ ಸೇನೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಮಧ್ಯೆ ಟಿಆರ್‌ಎಫ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ.
ಟಿಆರ್‌ಎಫ್ ಉಗ್ರ ಸಂಘಟನೆಯ ಹಿನ್ನಲೆ ಏನು ಗೊತ್ತಾ?
ಕನ್ನಡಿಗರೂ ಸೇರಿದಂತೆ 28ಜನರ ಸಾವಿಗೆ ಕಾರಣವಾಗಿರುವ ಟಿಆರ್‌ಎಫ್ ಉಗ್ರ ಸಂಘಟನೆ ಆರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿತು. 2019ರಲ್ಲಿ ಅಸ್ತಿತ್ವಕ್ಕೆ ಬಂದ ಈ ಟಿಆರ್‌ಎಫ್ ಭಯೋತ್ಪಾದಕ ಸಂಘಟನೆಯು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಅಂಗ ಸಂಘಟನೆಯಾಗಿದೆ.
ಎರಡು ವರ್ಷಗಳ ಹಿಂದೆ ಜಂಟಿ ಸೇನಾ ಪೊಲೀಸ್ ತಂಡದ ಮೇಲೆ ದಾಳಿ ನಡೆಸಿದ್ದ ಟಿಆರ್‌ಎಫ್:
ಇನ್ನೂ ಟಿಆರ್‌ಎಫ್ ಉಗ್ರ ಸಂಘಟನೆ ಈ ರೀತಿಯ ದಾಳಿ ಮಾಡಿರುವುದು ಇದೇ ಮೊದಲೇನಲ್ಲ. 2023ರ ಸೆಪ್ಟೆಂಬರ್ನಲ್ಲಿ ಜಂಟಿ ಸೇನಾ-ಪೊಲೀಸ್ ತಂಡದ ಮೇಲೆ ಇದೇ ಲಷ್ಕರ್‌ನ ರೆಸಿಸ್ಟೆನ್ಸ್ ಫೋರ್ಸ್ ದಾಳಿ ನಡೆಸಿತ್ತು.
ಇದನ್ನೂ ಓದಿ- ಒಂದು ವಾರದ ಹಿಂದೆ ನೀಡಿದ್ದ ಪಾಕ್ ಸೇನಾ ಮುಖ್ಯಸ್ಥನ ಭಾಷಣದ ಬೆನ್ನಲ್ಲೇ ಪಹಲ್ಗಾಮ್ ಮೇಲೆ ಉಗ್ರರ ದಾಳಿ
ಯುವಕರನ್ನು ದಾರಿತಪ್ಪಿಸಿ ಭಯೋತ್ಪಾದಕ ಕಾರ್ಯಗಳಲ್ಲಿ ತೊಡಗಿಸುವ ಕೆಲಸ ಮಾಡುತ್ತಾ ಬಂದಿರುವ ಟಿಆರ್‌ಎಫ್ ಸಂಘಟನೆಯಲ್ಲಿ ಸಾಜಿದ್ ಜಟ್, ಸಜ್ಜದ್ ಗುಲ್ ಮತ್ತು ಸಲೀಂ ರೆಹಮಾನಿ ಪ್ರಮುಖರಾಗಿದ್ದಾರೆ. ಗಮನರ್ಘ ಸಂಗತಿ ಎಂದರೆ ಈ ಎಲ್ಲಾ ಉಗ್ರರು ಆರಂಭದಿಂದಲೂ ಎಲ್‌ಇಟಿ ಜೊತೆ ಸಂಬಂಧ ಹೊಂದಿದ್ದಾರೆ.
ಲಷ್ಕರ್-ಎ-ತೈಬಾ (ಎಲ್‌ಇಟಿ) ಯ ಪ್ರತಿನಿಧಿ ಎಂದು ಪರಿಗಣಿಸಲಾಗಿರುವ ಟಿಆರ್‌ಎಫ್, ಪ್ರವಾಸಿಗರು, ಅಲ್ಪಸಂಖ್ಯಾತ ಕಾಶ್ಮೀರಿ ಪಂಡಿತರು ಮತ್ತು ಕಣಿವೆಯ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಈ ಮೊದಲೂ ಕೂಡ ಹಲವು ಉಗ್ರ ದಾಳಿಗಳನ್ನು ನಡೆಸಿದೆ. 2025ರಲ್ಲಿ ಜುಲೈ ತಿಂಗಳಿನಲ್ಲಿ ಪವಿತ್ರ ಅಮರನಾಥ ಯಾತ್ರೆ ಆರಂಭವಾಗುತ್ತಿದೆ. ಇದೀಗ ಅಮರನಾಥ ಯಾತ್ರೆ ಆರಂಭವಾಗುವ ಹೊಸ್ತಿಲಲ್ಲಿ ಉಗ್ರ ಸಂಘಟನೆಯು ಈ ಕೃತ್ಯ ಎಸಗಿದೆ.
ಸಂಘಟನೆಯು ಮತ್ತಷ್ಟು ಭಯೋತ್ದಾದಕ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಆನ್ಲೈನ್ ಮಾಧ್ಯಮವನ್ನು ಬಳಸಿಕೊಂಡು ಯುವಕರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂತಲೂ ಹೇಳಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಜನರನ್ನು ಅವರ ದೇಶದ ವಿರುದ್ಧ ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ಪ್ರಚೋದಿಸುವ ಕೆಲಸವನ್ನು ಟಿಆರ್‌ಎಫ್ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಡುತ್ತಿದೆ.
ಇದನ್ನೂ ಓದಿ- Pahalgam terror attack: ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ದುರಂತ ಸಾವು
ಪಾಕಿಸ್ತಾನ ಮೂಲದ ಟಿಆರ್‌ಎಫ್ ಸಂಘಟನೆಯನ್ನು ಉಗ್ರ ಸಂಘಟನೆ ಎಂದು 2023ರಲ್ಲೇ ಕೇಂದ್ರ ಸರ್ಕಾರ ಘೋಷಿಸಿತ್ತುಈ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್‌ನನ್ನು ಉಗ್ರನೆಂದು ಕೇಂದ್ರ ಗೃಹ ಇಲಾಖೆ ಘೋಷಿಸಿತ್ತು. ಗೃಹ ವ್ಯವಹಾರಗಳ ಸಚಿವಾಲಯ (MHA) ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (Lashkar-e-Taiba) ನಿಷೇಧಿತ ಭಯೋತ್ಪಾದಕ ಸಂಘಟನೆಯ ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಮತ್ತು ಅದರ ಅಡಿ ಇರುವ ಇತರೆ ಸಂಘಟನೆಗಳನ್ನು ನಿಷೇಧಿಸಿತ್ತು.
ಕಾಶ್ಮೀರ ಪಂಡಿತರ ಹತ್ಯೆಗೆ ಬೆದರಿಕೆ ಹಾಕಿದ್ದ ಹಾಗೂ ಒಂದಲ್ಲ ಒಂದು ದುಷ್ಕೃತ್ಯ ಎಸಗುತ್ತಲೇ ಇದ್ದ ಟಿಆರ್‌ಎಫ್ ಉಗ್ರ ಸಂಘಟನೆಯನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ 1967 ರ ಅಡಿಯಲ್ಲಿ ಗೃಹ ವ್ಯವಹಾರಗಳ ಸಚಿವಾಲಯ (MHA)ವು ಅವುಗಳನ್ನು ಭಯೋತ್ಪಾದಕ ಸಂಘಟನೆಗಳು ಎಂದು ಘೋಷಣೆ ಮಾಡಿತ್ತು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









