Money Laundering Case: ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಅವರ ಪತ್ನಿಗೆ ಸಮನ್ಸ್ ಜಾರಿ

ಕಲ್ಲಿದ್ದಲು ಕಳ್ಳಸಾಗಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

Written by - Zee Kannada News Desk | Last Updated : Aug 28, 2021, 04:39 PM IST
  • ಕಲ್ಲಿದ್ದಲು ಕಳ್ಳಸಾಗಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
  • ಸೆಪ್ಟೆಂಬರ್ 6 ರಂದು ನವದೆಹಲಿಯಲ್ಲಿರುವ ಏಜೆನ್ಸಿಯ ಮುಂದೆ ಹಾಜರಾಗುವಂತೆ ಹೇಳಲಾಗಿದ್ದರೆ, ಅವರ ಪತ್ನಿಗೆ ಸೆಪ್ಟೆಂಬರ್ 1 ರಂದು ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ
 Money Laundering Case: ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಅವರ ಪತ್ನಿಗೆ ಸಮನ್ಸ್ ಜಾರಿ  title=
file photo

ನವದೆಹಲಿ: ಕಲ್ಲಿದ್ದಲು ಕಳ್ಳಸಾಗಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಸೆಪ್ಟೆಂಬರ್ 6 ರಂದು ನವದೆಹಲಿಯಲ್ಲಿರುವ ಏಜೆನ್ಸಿಯ ಮುಂದೆ ಹಾಜರಾಗುವಂತೆ ಹೇಳಲಾಗಿದ್ದರೆ, ಅವರ ಪತ್ನಿಗೆ ಸೆಪ್ಟೆಂಬರ್ 1 ರಂದು ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.ಬ್ಯಾನರ್ಜಿ ಪರ ವಕೀಲ ಸಂಜಯ್ ಬಸು ಅವರಿಗೆ ಸೆಪ್ಟೆಂಬರ್ 3 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: Whatsapp Fake Message: ವಾಟ್ಸಾಪ್‌ನಲ್ಲಿ ವೈರಲ್ ಆಗುತ್ತಿರುವ ಈ ಲಿಂಕ್ ಅನ್ನು ಮರೆತೂ ಕೂಡ ಕ್ಲಿಕ್ ಮಾಡಬೇಡಿ

ಪಶ್ಚಿಮ ಬಂಗಾಳ ಪೊಲೀಸರ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಶ್ಯಾಮ್ ಸಿಂಗ್ ಮತ್ತು ಜ್ಞಾನವಂತ್ ಸಿಂಗ್ -ಇಡಿಯಿಂದ ಇದೇ ಪ್ರಕರಣಕ್ಕೆ ಕ್ರಮವಾಗಿ ಸೆಪ್ಟೆಂಬರ್ 8 ಮತ್ತು 9 ರಂದು ಸಮನ್ಸ್ ನೀಡಲಾಗಿದೆ.ತೃಣಮೂಲದ ಪ್ರಧಾನ ಕಾರ್ಯದರ್ಶಿಯಾಗಿರುವ ಅಭಿಷೇಕ್ ಬ್ಯಾನರ್ಜಿ (Abhishek Banerjee), ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಕೂಡ ಆಗಿದ್ದಾರೆ.

ಇದನ್ನು ಓದಿ- ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟಿನ್ ಗೆ ಕರೆ ಮಾಡಿ ಪ್ರಧಾನಿ ಮೋದಿ ಹೇಳಿದ್ದೇನು?

ಸಿಬಿಐನ ಎಫ್ಐಆರ್ ಅನ್ನು ಗಮನಿಸಿದ ಇಡಿ, ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕ ಸೇವಕರ ಸಹಭಾಗಿತ್ವದಲ್ಲಿ ನಡೆಸಲಾದ ಸರ್ಕಾರಿ ಕಲ್ಲಿದ್ದಲು ಕ್ಷೇತ್ರಗಳಲ್ಲಿ ಕಳ್ಳತನದ ಆರೋಪದ ಮೇಲೆ ಮನಿ ಲಾಂಡರಿಂಗ್ ತನಿಖೆಯನ್ನು ಆರಂಭಿಸಿತು.ಕೋಲ್ಕತ್ತಾದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಳಿರುವ ಫೆಬ್ರವರಿ 23 ರಂದು ಸಿಬಿಐ ರುಜಿರಾ ಬ್ಯಾನರ್ಜಿಯನ್ನು ಪ್ರಶ್ನಿಸಿತ್ತು. ಈ ಪ್ರಕರಣದಲ್ಲಿ ಆಕೆಯ ಸಹೋದರಿ ಮತ್ತು ಕುಟುಂಬವನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News