ನವದೆಹಲಿ: ಮಾಣಿಕ್ ಸಹಾ ಮತ್ತೆ ತ್ರಿಪುರಾ ಮುಖ್ಯಮಂತ್ರಿಯಾಗಲಿದ್ದಾರೆ. ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮಾಹಿತಿಯ ಪ್ರಕಾರ, ಮಾರ್ಚ್ 8ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ಮೋದಿ ಕೂಡ ಭಾಗವಹಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಫೆಬ್ರವರಿ16ರಂದು ನಡೆದ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 32 ಸ್ಥಾನಗಳನ್ನು ಗೆದ್ದಿತ್ತು. 60 ವಿಧಾನಸಭಾ ಸ್ಥಾನ ಹೊಂದಿರುವ ತ್ರಿಪುರಾದಲ್ಲಿ ಸರ್ಕಾರ ರಚಿಸಲು 31 ಸ್ಥಾನಗಳ ಅಗತ್ಯವಿದೆ. ಸರ್ಕಾರ ರಚಿಸಲು ಬಿಜೆಪಿಗೆ ಸಂಪೂರ್ಣ ಬಹುಮತವಿದೆ. ಅದರ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ 1 ಸ್ಥಾನವನ್ನು ಪಡೆದುಕೊಂಡಿದೆ. 42 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಬುಡಕಟ್ಟು ಮೂಲದ ತಿಪ್ರಾ ಮೋಥಾ ಪಕ್ಷ 13 ಸ್ಥಾನಗಳೊಂದಿಗೆ 2ನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸಿಪಿಐ(ಎಂ) 11 ಸ್ಥಾನ ಪಡೆದರೆ, ಕಾಂಗ್ರೆಸ್ 3 ಸ್ಥಾನಗಳನ್ನು ಗೆದ್ದಿದೆ.


ಇದನ್ನೂ ಓದಿ: ಅತ್ತೆಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ತುಂಬಿಟ್ಟ ಸೊಸೆ..!


ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿಯ ನೂತನವಾಗಿ ಆಯ್ಕೆಯಾದ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಸೋಮವಾರ ಸಭೆ ನಡೆಸಿದರು. ನೂತನ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭ ಬುಧವಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸುವ ನಿರೀಕ್ಷೆಯಿದೆ. ಶಾಸಕರ ಈ ಸಭೆಯಲ್ಲಿ ಮಾಣಿಕ್ ಸಹಾ ಮತ್ತೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು. ಅಗರ್ತಲಾದಲ್ಲಿ ನಡೆದ ಈ ಸಭೆಯಲ್ಲಿ ಹೊಸದಾಗಿ ಚುನಾಯಿತ ಶಾಸಕರಲ್ಲದೆ, ಬಿಜೆಪಿಯ ಈಶಾನ್ಯ ಸಂಯೋಜಕ ಸಂಬಿತ್ ಪಾತ್ರ, ಮಾಣಿಕ್ ಸಹಾ, ಬಿಜೆಪಿ ಅಧ್ಯಕ್ಷ ರಾಜೀಬ್ ಭಟ್ಟಾಚಾರ್ಯ, ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.


ಮಾಹಿತಿಯ ಪ್ರಕಾರ ಮಂಗಳವಾರ ಮೇಘಾಲಯ, ನಾಗಾಲ್ಯಾಂಡ್ ಮತ್ತು ಬುಧವಾರ ತ್ರಿಪುರಾದ ನೂತನ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಮಂತ್ರಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಶಿಲ್ಲಾಂಗ್‌ನಲ್ಲಿ ಮೇಘಾಲಯದ ನೂತನ ಮುಖ್ಯಮಂತ್ರಿ ಮತ್ತು ಅವರ ಸಚಿವ ಸಂಪುಟದ ಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.


ಇದನ್ನೂ ಓದಿ: Viral Video: ಕೆಲಸಕ್ಕೆ ಬರಲ್ಲ ಎಂದ ಬಾಲಕಿಗೆ ಚಾಕು ಇರಿದ ರಾಕ್ಷಸ ಜುಟ್ಟು ಹಿಡಿದು ರಸ್ತೆಯುದ್ದಕ್ಕೂ ಎಳೆದೊಯ್ದ..! ಮುಂದೆ?


ಇದಕ್ಕೂ ಮೊದಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ತ್ರಿಪುರಾಗೆ ಭೇಟಿ ನೀಡಿದ್ದರು. ಸರ್ಕಾರ ರಚನೆಯ ಕುರಿತು ಚರ್ಚಿಸಲು ಸಹಾ, ಭೌಮಿಕ್ ಮತ್ತು ಇತರ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದರು. ಶರ್ಮಾ ಅವರು ಭಾನುವಾರ ದೆಹಲಿಗೆ ಭೇಟಿ ನೀಡಿ ಶಾ ಮತ್ತು ನಡ್ಡಾ ಅವರೊಂದಿಗೆ ಸಭೆ ನಡೆಸಿದರು. ಈ ವೇಳೆ ತ್ರಿಪುರ-ನಾಗಾಲ್ಯಾಂಡ್‌ನಲ್ಲಿ ಸರ್ಕಾರ ರಚನೆಯ ಬಗ್ಗೆ ಚರ್ಚಿಸಿದ್ದಾರೆಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.