ಅಗರ್ತಲ: ತ್ರಿಪುರದಲ್ಲಿ ಎಡಪಂಥೀಯ ಆಡಳಿತದ ಅವಧಿಯಲ್ಲಿ ನಡೆದ 630 ಕೋಟಿ ರೂ.ಗಳ ಹಗರಣದಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತಿರುವ ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಹಾಗೂ ಮಾಜಿ ಪಿಡಬ್ಲ್ಯುಡಿ ಸಚಿವ ಬಾದಲ್ ಚೌಧರಿ ಅವರನ್ನು ಬಂಧಿಸಿರುವುದಾಗಿ ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ ಚೌಧರಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ತ್ರಿಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಣಿಕ್ ದಾಸ್ ತಿಳಿಸಿದ್ದಾರೆ. ಸ್ಥಳೀಯ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದ ಬಳಿಕ ತಲೆಮರೆಸಿಕೊಂಡಿದ್ದ ಚೌಧರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ತೆರಳಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್, ಸಿಪಿಐ(ಎಂ) ರಾಜ್ಯ ಸಮಿತಿ ಕಾರ್ಯದರ್ಶಿ ಗೌತಮ್ ದಾಸ್ ಮತ್ತು ಇತರ ಮುಖಂಡರು ಸೋಮವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಚೌಧರಿ ಅವರ ಆರೋಗ್ಯ ವಿಚಾರಿಸಿದ್ದಾರು. ಪಿಡಬ್ಲ್ಯುಡಿ ಮಾಜಿ ಸಚಿವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.