ಮಧ್ಯಪ್ರದೇಶದಲ್ಲಿ ಕೊಳವೆ ಬಾವಿ ಅಪಘಾತ : ರಕ್ಷಣಾ ಕಾರ್ಯಾಚರಣೆ ಆರಂಭ
Madhyapradesh Tube well accident : ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಆರು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.
Rescue operation : ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಮಧ್ಯಪ್ರದೇಶದಲ್ಲಿನ ಉತ್ತರ ಪ್ರದೇಶದ ಗಡಿ ಸಮೀಪದ ಮಾಣಿಕಾ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.
ಆರು ವರ್ಷದ ಬಾಲಕ ಭಾವಿ ಬಳಿ ಆಟವಾಡುತ್ತಿರುವಾಗ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ ಎನ್ನುವ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : Sridevi first husband: ಶ್ರೀದೇವಿ ಮೊದಲ ಪತಿ ಈ ಖ್ಯಾತ ನಟ.. ಬೋನಿ ಕಪೂರ್ʼಗಿಂತ ಮೊದಲು ಮದುವೆಯಾದದ್ದು ಇವರನ್ನೇ.!
ರೇವಾ ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ಮಗು ಸುಮಾರು 40 ಅಡಿ ಆಳದಲ್ಲಿ ಸಿಲುಕಿದ್ದಾನೆ ಮತ್ತು ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದ್ದು ಕಾರ್ಯಾಚರಣೆ ಆರಂಭವಾಗಿದೆ.
ಮಗು ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊಳವೆ ಬಾವಿಗೆ ಬಿದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಪೈಪ್ ಮೂಲಕ ಆಮ್ಲಜನಕ ಪೂರೈಸಲಾಗುತ್ತಿದೆ.
ಮಗುವಿನ ಸ್ಥಿತಿಗತಿಗಳ ವೀಕ್ಷಣೆಗಾಗಿ ಕ್ಯಾಮೆರಾವನ್ನು ಕೊಳವೆ ಬಾವಿ ಒಳಗಡೆ ಇಳಿಸಿದ್ದು ಆದರೆ ಅಡಚಣೆಗಳು ಎದುರಾಗುತ್ತಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋಂಕರ್ ತಿಳಿಸಿದ್ದಾರೆ.
ಇದನ್ನು ಓದಿ : Gold Rate: ಆಭರಣ ಪ್ರಿಯರಿಗೆ ಬಿಗ್‌ಶಾಕ್.. ವಾರಾಂತ್ಯದಲ್ಲಿ ಮೂರು ಪಟ್ಟು ಹೆಚ್ಚಾದ ಚಿನ್ನದ ದರ.. ಬೆಳ್ಳಿ ಹೇಗಿದೆ?
ಕೊಳವೆಬಾವಿ ಸುಮಾರು 70 ಅಡಿ ಆಳವಿತ್ತು ಮಗುವನ್ನು ರಕ್ಷಿಸಲು ಕೊಳವೆ ಬಾವಿಗೆ ಸಮಾನಾಂತರವಾಗಿ ಹೊಂಡ ಕೊರೆಯಲಾಗುತ್ತಿದೆ ಮತ್ತು ಇದೇ ಸಮಯದಲ್ಲಿ ಮಳೆ ಆಗುತ್ತಿರುವುದರಿಂದ ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ರಕ್ಷಣಾ ಕಾರ್ಯಕ್ಷಣೆಗಾಗಿ ಈಗಾಗಲೇ ರಾಜ್ಯ ವಿಪತ್ತು ತುರ್ತು ನಿರ್ವಹಣಾಪಡೆ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಅಲ್ಲದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ವಾರಣಾಸಿಯಿಂದ ಕರೆಸಿಕೊಳ್ಳಲಾಗಿದ್ದು ಶೀಘ್ರದಲ್ಲೇ ಸ್ಥಳಕ್ಕೆ ಧಾವಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.