ನವದೆಹಲಿ: ಕೃಷಿ ಕಾನೂನುಗಳ ವಿರುದ್ಧ ಇಬ್ಬರು ಆಮ್ ಆದ್ಮಿ ಪಕ್ಷದ ಸಂಸದರು ಇಂದು ಸಂಸತ್ತಿನ ಕೇಂದ್ರ ಸಭಾಂಗಣದೊಳಗೆ ಘೋಷಣೆಗಳನ್ನು ಕೂಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 96ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸುತ್ತಿದ್ದಾಗ ಈ ಗದ್ದಲ ಭುಗಿಲೆದ್ದಿತು.


COMMERCIAL BREAK
SCROLL TO CONTINUE READING

'ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ': ರೈತರಿಗೆ ಪ್ರಧಾನಿ ಮೋದಿ ಮನವಿ


ಎಎಪಿ ಸಂಸದ ಸಂಜಯ್ ಸಿಂಗ್ ಅವರು ಮತ್ತು ಅವರ ಪಕ್ಷದ ಸಹೋದ್ಯೋಗಿ ಭಗವತ್ ಮನ್ ಅವರು ಕೃಷಿ ಕಾನೂನುಗಳ ವಿರುದ್ಧ ಸೆಂಟ್ರಲ್ ಹಾಲ್ ಒಳಗೆ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆಯಲ್ಲಿ ಪೋಸ್ಟರ್ಗಳನ್ನು ಎತ್ತಿ ಹಿಡಿದಿರುವ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.ರೈತ ವಿರೋಧಿ ಕಪ್ಪು ಕಾನೂನುಗಳನ್ನು' ಹಿಂತೆಗೆದುಕೊಳ್ಳಿ ಎಂದು ಕೂಗುತ್ತಾರೆ.


ಮೋದಿ 'ಮನ್ ಕಿ‌ ಬಾತ್' ಕಾರ್ಯಕ್ರಮದ ವೇಳೆ ತಟ್ಟೆ ಬಾರಿಸಿ ಪ್ರತಿಭಟನೆ ನಡೆಸಲು ಕರೆ


'ಕೇಂದ್ರ ಸರ್ಕಾರವು ಸ್ಪಷ್ಟ ಪ್ರಸ್ತಾವನೆಯನ್ನು ಮಂಡಿಸಿದರೆ ಮಾತುಕತೆಗೆ ಸಿದ್ಧ'


ಪಂಜಾಬ್‌ನ ಸಂಗ್ರೂರ್‌ನ ಸಂಸದ ಶ್ರೀ ಮನ್ ಹಿಂದಿಯಲ್ಲಿ ಟ್ವೀಟ್ ಮಾಡಿ 'ಮೋದಿ ಸರ್ಕಾರದ ಕಣ್ಣುಗಳು ಮತ್ತು ಕಿವಿಗಳನ್ನು ತೆರೆಯಲು ರೈತ ಪರ ಘೋಷಣೆಗಳು ಕೇಂದ್ರ ಸಭಾಂಗಣದಲ್ಲಿ ಪ್ರತಿಧ್ವನಿಸಿದವು ಎಂದು ಹೇಳಿದರು.ಸೆಪ್ಟೆಂಬರ್‌ನಲ್ಲಿ ಸಂಸತ್ತಿನಲ್ಲಿ ಕೃಷಿ ಮಸೂದೆಗಳನ್ನು ತಡೆಯಲು ಪ್ರಯತ್ನಿಸಿದ ಪ್ರತಿಪಕ್ಷಗಳು ಈ ಹಿಂದೆ ಮಸೂದೆಗಳಿಗೆ ಸಹಿ ಹಾಕದಂತೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಮನವಿ ಮಾಡಿದ್ದವು. ಮಸೂದೆಗಳನ್ನು ರಾಜ್ಯಸಭೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ಅಂಗೀಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ರಾಷ್ಟ್ರಪತಿಗಳು ಈ ಮೂರು ಮಸೂದೆಗಳಿಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದರು.