ನೋಯ್ಡಾ: ಶಾಲೆಯೊಂದರ ಗೋಡೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಧಾರುಣ ಘಟನೆ ಸೋಮವಾರ ಬೆಳಿಗ್ಗೆ ಉತ್ತರಪ್ರದೇಶದ ನೋಯ್ಡಾದ ಸಲಾಪುರ್​ ಗ್ರಾಮದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸೆಕ್ಟರ್ 49 ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ. 


ಘಟನೆ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಜಿ.ಬಿ.ನಗರ ಜಿಲ್ಲಾಡಲಿತಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆಯೂ ಆದೇಶಿಸಿದ್ದಾರೆ.