Barabanki Tragedy: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿದಿದ್ದು, ಪರಿಣಾಮ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸುತ್ತಮುತ್ತಲಿನ ಪರಿಸರದಲ್ಲಿ ವಾಸಿಸುವ ಜನರು ಸಹ ಮನೆಯ ಅವಶೇಷಗಳ ಅಡಿಯಲ್ಲಿ ಹೂತು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಎಸ್‌’ಡಿಆರ್‌ಎಫ್ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಕ್ಷಾ ಪಂಚಮಿ ಪುಣ್ಯದಿನ ಇಂದು.. ಈ ರಾಶಿಗಿರಲಿದೆ ಮಹಾಶಿವನ ಶ್ರೀರಕ್ಷೆ- ಸಂಪತ್ತು ವೃದ್ಧಿ


ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. 4 ಅಂತಸ್ತಿನ ಪಕ್ಕಾ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 10 ಮಂದಿ ಗಾಯಗೊಂಡವರನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.


ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಾಶಿಮ್ ಎಂಬ ವ್ಯಕ್ತಿಗೆ ಸೇರಿದ 4 ಅಂತಸ್ತಿನ ಪಕ್ಕಾ ಮನೆ ನೆಲಸಮವಾಗಿದೆ. ಸುತ್ತಮುತ್ತಲಿನ ಪರಿಸರದಲ್ಲಿ ವಾಸಿಸುತ್ತಿದ್ದ ಜನರು ಸಹ ಮನೆಯ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ. ಈ ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಜಿಲ್ಲಾ ಆಸ್ಪತ್ರೆಯ ಸಿಎಂಎಸ್‌’ನಿಂದ ದೃಢಪಟ್ಟಿದೆ.


ಮತ್ತೊಂದೆಡೆ 14 ಮಂದಿ ಅವಶೇಷಗಳಡಿ ಸಿಲುಕಿದ್ದು, 12 ಮಂದಿಯನ್ನು ಹೊರತೆಗೆಯಲಾಗಿದೆ ಎಂದು ಎಸ್ಪಿ ದಿನೇಶ್ ಸಿಂಗ್ ಸ್ಥಳದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ನೇಪಾಳ ವಿರುದ್ಧದ ಹಣಾಹಣಿಗೆ ಟೀಂ ಇಂಡಿಯಾ Playing 11 ರೆಡಿ: 3 ಮ್ಯಾಚ್ ವಿನ್ನರ್ಸ್’ಗಿಲ್ಲ ಸ್ಥಾನ


ರೋಶನಿ ಬಾನೋ (22 ವರ್ಷ) ಮತ್ತು ಹಕೀಮುದ್ದೀನ್ (28 ವರ್ಷ) ಎಂಬವರು ಈ ಅವಘಡದಲ್ಲಿ ಮೃತಪಟ್ಟಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ