ಕಾಶ್ಮೀರ: ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪಟ್ಟಣದಲ್ಲಿ ಶನಿವಾರ (ಫೆಬ್ರವರಿ 22) ನಡೆದ ಘರ್ಷಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಪೊಲೀಸರು, ಸಿಆರ್‌ಪಿಎಫ್ ಮತ್ತು ಸೇನೆಯು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೈಬಾ ಜೊತೆ ಸಂಬಂಧ ಹೊಂದಿದ್ದ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಘಟನೆಯ ಬಗ್ಗೆ ಟ್ವಿಟರ್‌ನಲ್ಲಿ ಹೆಚ್ಚಿನ ವಿವರಗಳನ್ನು ನೀಡಿರುವ ಕಾಶ್ಮೀರ ವಲಯ ಪೊಲೀಸರು "ಪೊಲೀಸ್, ಸಿಆರ್‌ಪಿಎಫ್ ಮತ್ತು ಸೈನ್ಯದ ಈ ಕಾರ್ಯಾಚರಣೆಯಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರೆದಿದೆ" ಎಂದು ಬರೆದಿದ್ದಾರೆ.
Sangam #Encounter Update: 02 LeT #terrorists have been #killed in this operation by Police, CRPF & Army. #Arms & ammunition recovered. Details shall follow. @JmuKmrPolice https://t.co/5AFEMXJJAn
— Kashmir Zone Police (@KashmirPolice) February 21, 2020