ಕಾಶ್ಮೀರ:  ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪಟ್ಟಣದಲ್ಲಿ ಶನಿವಾರ (ಫೆಬ್ರವರಿ 22) ನಡೆದ ಘರ್ಷಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ಪೊಲೀಸರು, ಸಿಆರ್‌ಪಿಎಫ್ ಮತ್ತು ಸೇನೆಯು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೈಬಾ ಜೊತೆ ಸಂಬಂಧ ಹೊಂದಿದ್ದ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.


ಘಟನೆಯ ಬಗ್ಗೆ ಟ್ವಿಟರ್‌ನಲ್ಲಿ ಹೆಚ್ಚಿನ ವಿವರಗಳನ್ನು ನೀಡಿರುವ ಕಾಶ್ಮೀರ ವಲಯ ಪೊಲೀಸರು "ಪೊಲೀಸ್, ಸಿಆರ್‌ಪಿಎಫ್ ಮತ್ತು ಸೈನ್ಯದ ಈ ಕಾರ್ಯಾಚರಣೆಯಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರೆದಿದೆ" ಎಂದು ಬರೆದಿದ್ದಾರೆ.