ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿದ್ದಾರೆ. ಇದಕ್ಕೂ ಮುಂಚಿತವಾಗಿ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರನ್ನು ಬಂಧಿಸಲಾಗಿತ್ತು.
ಇದನ್ನು ಓದಿ: Mother's Day special: ಪ್ರತಿಯೊಬ್ಬ ತಾಯಿಯೂ ಸೇವಿಸಬೇಕಾದ ಆರೋಗ್ಯಕರ ಆಹಾರ
ಕುಲ್ಗಾಮ್ ಜಿಲ್ಲೆಯ ದೇವ್ಸರ್ನ ಚೆಯಾನ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸೇನೆ ಕಾರ್ಯಾಚರಣೆ ನಡೆಸಿದೆ. ಈ ಸಂದರ್ಭದಲ್ಲಿ ಭಯೋತ್ಪಾದಕರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿಲು ಮುಂದಾದಾಗ ಯೋಧರು ಸಹ ತಕ್ಕ ಪ್ರತ್ಯುತ್ತರ ನೀಡಿ ಇಬ್ಬರನ್ನು ಹೊಡೆದುರುಳಿಸಿದ್ದಾರೆ.
ಸೇನೆಯ ಗುಂಡೇಟಿಗೆ ಬಲಿಯಾದ ಓರ್ವ ಉಗ್ರನನ್ನು ಎಲ್ಇಟಿ ಸಂಘಟನೆಯ ಹೈದರ್ ಎಂದು ಗುರುತಿಸಲಾಗಿದೆ. ಸದ್ಯ ಎನ್ಕೌಂಟರ್ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಸೇರಿದಂತೆ ಕೆಲ ಆಯುಧಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ.
ಇದನ್ನು ಓದಿ: ಬೆಂಗಳೂರು ಜನರಿಗೆ ಮತ್ತೊಂದು ಕಹಿ ಸುದ್ದಿ : ಸದ್ಯದಲ್ಲೇ ಏರಿಕೆ ಆಗಲಿದೆ ನೀರಿನ ದರ..!
ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಬಂಧನ:
ಇನ್ನು ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಹೈಬ್ರೀಡ್ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಉಗ್ರರನ್ನು ಅಬಿದ್ ಅಲಿ ಮತ್ತು ಫೈಸಲ್ ಹಸನ್ ಪರ್ರೆ ಎಂದು ಗುರುತಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.