ಛತ್ತೀಸ್ಗಢ: ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರ ಹತ್ಯೆ
ನಿನ್ನೆ ರಾತ್ರಿ ಇಲ್ಲಿನ ಮಾಲೆಪರಾದಲ್ಲಿ ನಕ್ಸಲರು ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಡಿಐಜಿ ಪಿ. ಸುಂದರರಾಜ್ ಶುಕ್ರವಾರ ತಿಳಿಸಿದ್ದಾರೆ.
ಕಂಕರ್: ಮಾಲೆಪಾರದಲ್ಲಿ ನಿನ್ನೆ ರಾತ್ರಿ ಜಿಲ್ಲಾ ರಿಸರ್ವ್ ಗಾರ್ಡ್ (ಜಿಲ್ಲಾ ಮೀಸಲು ಪಡೆ) ಮತ್ತು ನಕ್ಸಲೀಯರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ನಕ್ಸಲ್ ವಿರೋಧಿ ಕಾರ್ಯಾಚರಣೆಯ ಡಿಐಜಿ ಪಿ. ಸುಂದರರಾಜ್ ಶುಕ್ರವಾರ ತಿಳಿಸಿದ್ದಾರೆ.
ಟಡೊಕಿ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಕಾಡಿನಲ್ಲಿ ಎನ್‌ಕೌಂಟರ್ ನಡೆದಿದ್ದು, ಇಬ್ಬರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಎನ್‌ಕೌಂಟರ್ ಸ್ಥಳದಿಂದ ಎರಡು ಎಸ್‌ಎಲ್‌ಆರ್ ರೈಫಲ್‌ಗಳು ಮತ್ತು ಒಂದು .303 ರೈಫಲ್ ಜೊತೆಗೆ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.