ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಕೋರ್ಟ್ ಕಟ್ಟಡದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ.
ಕೊರ್ಟ್ ಆವರಣದೊಳಗೆ ನುಗ್ಗಿದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೋಲಿಸರನ್ನು ನಿಯೋಜಿಸಲಾಗಿದ್ದು, ಕೋರ್ಟ್ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
#SpotVisuals Terrorists opened fired on a police guard post, deployed at District court complex in #Pulwama earlier today. Two police personnel lost their lives while three sustained injuries in the exchange of fire #JammuAndKashmir pic.twitter.com/nmhQf6Wop7
— ANI (@ANI) June 12, 2018
ಮತ್ತೊಂದೆಡೆ ಅನಂತನಾಗ್ ಜಿಲ್ಲೆಯ ಸದಾರ್ ಎಂಬಲ್ಲಿ ಮಂಗಳವಾರ ಬೆಳಿಗ್ಗೆ 3 ಗಂಟೆ ಸಮಯದಲ್ಲಿ ನಡೆದ ಉಗ್ರರ ಪ್ರತ್ಯೇಕ ದಾಳಿಯಲ್ಲಿ 10 ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅನಂತ್ನಾಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.