ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಕೋರ್ಟ್‌ ಕಟ್ಟಡದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಕೊರ್ಟ್ ಆವರಣದೊಳಗೆ ನುಗ್ಗಿದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೋಲಿಸರನ್ನು ನಿಯೋಜಿಸಲಾಗಿದ್ದು, ಕೋರ್ಟ್ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. 



ಮತ್ತೊಂದೆಡೆ ಅನಂತನಾಗ್ ಜಿಲ್ಲೆಯ ಸದಾರ್ ಎಂಬಲ್ಲಿ ಮಂಗಳವಾರ ಬೆಳಿಗ್ಗೆ 3 ಗಂಟೆ ಸಮಯದಲ್ಲಿ ನಡೆದ ಉಗ್ರರ ಪ್ರತ್ಯೇಕ ದಾಳಿಯಲ್ಲಿ 10 ಸಿಆರ್‌ಪಿಎಫ್‌ ಯೋಧರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅನಂತ್ನಾಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.