ಎನ್‌ಕೌಂಟರ್‌ ಬಗ್ಗೆ ಸೈಬರಾಬಾದ್ ಪೊಲೀಸ್ ಆಯುಕ್ತರು ಹೇಳಿದ್ದೇನು?

ಹೈದರಾಬಾದ್‌ನ ಮಹಿಳಾ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಘಟನಾ ಸ್ಥಳಕ್ಕೆ ಕರೆತರಲಾಗಿದೆ ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ವಿ.ಸಿ.ಸಜ್ಜನರ್ ಜೀ ನ್ಯೂಸ್‌ಗೆ ತಿಳಿಸಿದ್ದಾರೆ.

Updated: Dec 6, 2019 , 03:45 PM IST
ಎನ್‌ಕೌಂಟರ್‌ ಬಗ್ಗೆ ಸೈಬರಾಬಾದ್ ಪೊಲೀಸ್ ಆಯುಕ್ತರು ಹೇಳಿದ್ದೇನು?

ನವದೆಹಲಿ / ಹೈದರಾಬಾದ್: ಮಹಿಳಾ ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ  ನಾಲ್ವರು ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದ್ದಾರೆ. 

ಈ ಎನ್‌ಕೌಂಟರ್‌ ಬಗ್ಗೆ ಜಿ ನ್ಯೂಸ್‌ ಜೊತೆಗೆ ಮಾತನಾಡಿರುವ  ಸೈಬರಾಬಾದ್ ಪೊಲೀಸ್ ಆಯುಕ್ತ ವಿ.ಸಿ.ಸಜ್ಜನರ್(VC Sajjanar), ಈ ಎನ್‌ಕೌಂಟರ್‌ನಲ್ಲಿ ಆರೋಪಿಗಳು ಪೊಲೀಸರ ಕೈಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಇಬ್ಬರು ಪೊಲೀಸರು ಸಹ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹೈದರಾಬಾದ್‌ನ ಮಹಿಳಾ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಘಟನಾ ಸ್ಥಳಕ್ಕೆ ಕರೆತರಲಾಯಿತು. ಈ ವೇಳೆ ದಿಶಾರ ಮೊಬೈಲ್, ಡಾಟಾ ಬ್ಯಾಂಕ್ ಮತ್ತು ಅವರ ವಾಚ್ ಅನ್ನು ಎಲ್ಲಿ ಬಚ್ಚಿಟ್ಟಿದ್ದೀರಿ ಎಂದು ಆರೋಪಿಗಳನ್ನು ಕೇಳಲಾಯಿತು. ಈ ಸಂದರ್ಭದಲ್ಲಿ ಅವರು ಘಟನಾ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮರೆಮಾದಿರುವುದಾಗಿ ತಿಳಿಸಿ ಸುಮಾರು 200 ಮೀಟರ್ ದೂರಕ್ಕೆ ಕರೆದೊಯ್ಯುತ್ತಿದ್ದಂತೆ, ಅವರು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಿತ್ತು ಪೊಲೀಸ್ ತಂಡದ ಮೇಲೆ ಹಲ್ಲೆ ನಡೆಸಿದ ಪರಾರಿಯಾಗಲು ಯತ್ನಿಸಿದರು. ಇದರ ನಂತರ ಪೊಲೀಸ್ ತಂಡ ಎನ್‌ಕೌಂಟರ್‌ನಲ್ಲಿ ಅವರನ್ನು ಕೊಂದಿತು. ಈ ಘಟನೆಯಲ್ಲಿ ಇಬ್ಬರು ಪೊಲೀಸರು ಕೂಡ ಗಾಯಗೊಂಡಿದ್ದಾರೆ ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ವಿ.ಸಿ.ಸಜ್ಜನರ್ ಜೀ ನ್ಯೂಸ್‌ಗೆ ತಿಳಿಸಿದ್ದಾರೆ.