Building Collapses In Delhi: ಗುರುವಾರ(ಮಾರ್ಚ್ 21) ನಡು ರಾತ್ರಿ  02:16ರ ಸುಮಾರಿಗೆ ದೆಹಲಿಯ ಕಬೀರ್ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 


COMMERCIAL BREAK
SCROLL TO CONTINUE READING

ಪ್ರಾಥಮಿಕ ವರದಿಗಳ ಪ್ರಕಾರ, ಕಟ್ಟಡ ಕುಸಿತದ ಬಳಿಕ ಗಾಯಾಳುಗಳನ್ನು ಜಿ‌ಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ 30 ವರ್ಷದ ಅರ್ಷದ್ ಮತ್ತು 20 ವರ್ಷದ ತೌಹಿದ್ ಇಬ್ಬರು ಮೃತಪಟ್ಟಿದ್ದಾರೆ. 22 ವರ್ಷ ವಯಸ್ಸಿನ ರೆಹಾನ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 


ಇದನ್ನೂ ಓದಿ- Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು


ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ  ಈಶಾನ್ಯ ಡಿಸಿಪಿ ಜಾಯ್ ಟಿರ್ಕಿ, ನಡು ರಾತ್ರಿ ಕಟ್ಟಡ ಕುಸಿತದ ಬಗ್ಗೆ ನಮಗೆ ಕರೆ ಬರುತ್ತಿದ್ದಂತೆ, ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ವೇಳೆ ಅವಶೇಷಗಳಡಿಯಲ್ಲಿ ಸಿಲುಕಿದ್ದ  ಮೂರು ಮಂದಿಯನ್ನು ಹೊರಕ್ಕೆ ತೆಗೆಯಲಾಗಿದೆ. 


ಇದನ್ನೂ ಓದಿ- ತಲೆಯಲ್ಲಿ ರಕ್ತಸ್ರಾವ : ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು ಜಗ್ಗಿ ವಾಸುದೇವ್ 


ತಕ್ಷಣ ಅವರನ್ನು ಜಿಟಿಬಿ ಆಸ್ಪತ್ರೆಗೆ ರವಾನಿಸಲಾಗಿದೆ. ಅರ್ಷದ್ ಮತ್ತು ತೌಹಿದ್ ಎಂಬ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೋರ್ವ ರೆಹಾನ್ ಎಂಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. 


ಕುಸಿದಿರುವ ಕಟ್ಟಡದ ಮಾಲೀಕನನ್ನು ಶಾಹಿದ್ ಎಂದು ಗುರುತಿಸಲಾಗಿದ್ದು, ಆತನ ಪತ್ತೆಯಾಗಿ ಪೊಲೀಸರು ಶೋಧ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.