ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಈಗ ನಡೆಯುತ್ತಿರುವ ಭೀಕರ ಗುಂಡಿನ ಕಾಳಗದಲ್ಲಿ ಭದ್ರತಾ ಪಡೆಗಳು ಇಬ್ಬರು ಕಟ್ಟರ್‌ ಉಗ್ರರನ್ನು ಹೊಡೆದುರುಳಿಸಿರುವುದಾಗಿ ವರದಿಯಾಗಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಉತ್ತರ ಪ್ರದೇಶದ ಕುಪ್ವಾರ ಜಿಲ್ಲೆಯ ಲೋಲಾಬ್ ಎಂಬಲ್ಲಿನ ಖುಮರಿಯಾಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. 


ಖುಮರಿಯಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿಶೇಷ ಕಾರ್ಯಾಚರಣೆ ತಂಡ ಮತ್ತು ಭದ್ರತಾ ಪಡೆ ಕಾರ್ಯಾಚರಣೆ ನಡೆಸಿ ಇಬ್ಬರು ಉರರನ್ನು ಹತ್ಯೆ ಮಾಡಿದೆ ಎಂದು ಕುಪ್ವಾರಾ ಎಸ್‌ಎಸ್‌ಪಿ ಅಂಬರ್ಕರ್‌ ಶ್ರೀರಾಮ್‌ ದಿನಕರ್‌ ತಿಳಿಸಿದ್ದಾರೆ.



"ಜಂಟಿ ಕಾರ್ಯಾಚರಣೆ ತಂಡ ಉಗ್ರರ ಅಡಗುತಾಣವನ್ನು ಸಮೀಪಿಸುತ್ತಿದ್ದಂತೆ, ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು, ಮೃತದೇಹಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಎಸ್ಪಿ ಹೇಳಿದ್ದಾರೆ.