ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹ್ಯಾಂಡ್ವಾರಾದಲ್ಲಿ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಈ ಪ್ರದೇಶದಲ್ಲಿ 2-3 ಉಗ್ರರು ಅಡಗಿಕೊಂಡಿದ್ದಾರೆ ಎಂಬ ಶಂಕೆಯ ಮೇಲೆ ಸಿಆರ್ ಪಿಎಫ್, ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಗುಂಡಿನ ಚಕಮಕಿ ಆರಂಭವಾಗಿದೆ.
ದೀರ್ಘಕಾಲದವರೆಗೆ ಎರಡೂ ಕಡೆಗಳಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ. ಗುಂಡಿನ ದಾಳಿ ನಿಲ್ಲಿಸಿದ ನಂತರ, ಭದ್ರತಾ ಪಡೆಗಳ ತಂಡ ಎನ್ಕೌಂಟರ್ ನಡೆಸಲಾದ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಇಲ್ಲಿಯವರೆಗೆ, ಎರಡು ಮೃತ ದೇಹಗಳು ಕಂಡುಬಂದಿವೆ. ಇದೀಗ ಭದ್ರತಾ ಪಡೆ ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.