ನವದೆಹಲಿ: ಜೂನ್ 30 ರಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಬುಧವಾರದಂದು ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಉದ್ಧವ್ ಠಾಕ್ರೆ ರಾಜಿನಾಮೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಶಿವಸೇನಾ ನಾಯಕ ಉದ್ದವ್ ಠಾಕ್ರೆ "ನಾನು ಅನಿರೀಕ್ಷಿತ ರೀತಿಯಲ್ಲಿ ಅಧಿಕಾರಕ್ಕೆ ಬಂದಿದ್ದೇನೆ ಮತ್ತು ನಾನು ಅದೇ ರೀತಿಯಲ್ಲಿ ಹೊರಡುತ್ತಿದ್ದೇನೆ. ನಾನು ಶಾಶ್ವತವಾಗಿ ಹೋಗುವುದಿಲ್ಲ, ನಾನು ಇಲ್ಲೇ ಇರುತ್ತೇನೆ ಮತ್ತು ಮತ್ತೊಮ್ಮೆ ಶಿವಸೇನಾ ಭವನದಲ್ಲಿ ಕುಳಿತುಕೊಳ್ಳುತ್ತೇನೆ. ನನ್ನ ಎಲ್ಲಾ ಜನರನ್ನು ನಾನು ಒಟ್ಟುಗೂಡಿಸುವೆನು. ನಾನು ಸಿಎಂ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ಹೇಳಿದ್ದಾರೆ.


ಇದೆ ವೇಳೆ ಅವರು "ನಾವು ಅಧಿಕೃತವಾಗಿ ಬಾಳಾಸಾಹೇಬ್ ಠಾಕ್ರೆ ಹೆಸರಿಸಿದ ನಗರಗಳಾದ ಔರಂಗಾಬಾದ್ ಅನ್ನು ಸಂಭಾಜಿ ನಗರ ಎಂದು ಮತ್ತು ಓಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡಿರುವ ತೃಪ್ತಿ ನಮಗಿದೆ ಎಂದು ಅವರು ಹೇಳಿದರು.



ಇದನ್ನೂ ಓದಿ: Maharashtra Crisis : ಠಾಕ್ರೆಗೆ ಮಾಸ್ಟರ್ ಸ್ಟ್ರೋಕ್ ನೀಡಲು ಮುಂದಾದ ಶಿಂಧೆ, ಹೊಸ ಪಕ್ಷ ಕಟ್ಟಲು ನಿರ್ಧಾರ!


ಇದಕ್ಶಿಕೂ ಮೊದಲು ಶಿವಸೇನಾ ಮುಖ್ಯ ಸಚೇತಕ ಸುನೀಲ್ ಪ್ರಭು ಅವರ ಮನವಿಯ ಮೇಲೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿ ಮತ್ತು ನಾಳೆಯ ಸದನದ ಪರೀಕ್ಷೆಯು ಪ್ರಸ್ತುತ ಅರ್ಜಿಯ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ ಎಂದು ಹೇಳಿತ್ತು.ಸಲ್ಮಾನ್ ಖಾನ್ ಚಿತ್ರದಿಂದ ತೆಲುಗಿನ DSP ಔಟ್, ರವಿ ಬಸ್ರೂರ್ ಇನ್..!


ಗುರುವಾರ ಬೆಳಗ್ಗೆ 11 ಗಂಟೆಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಎಂವಿಎ ಸರ್ಕಾರಕ್ಕೆ ಸೂಚಿಸಿರುವ ನಿರ್ಧಾರವನ್ನು ಗಮನದಲ್ಲಿಟ್ಟುಕೊಂಡು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಸಿಂಘ್ವಿ ಸಲ್ಲಿಸಿದ ಅರ್ಜಿ ಸಲ್ಲಿಕೆಗಳನ್ನು ಪೀಠವು ಹಿಂದಿನ ದಿನ ಸ್ವೀಕರಿಸಿತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ