ನವದೆಹಲಿ: ಯೂನಿವರ್ಸಿಟಿ ಗ್ರಾಂಟ್ ಕಮಿಷನ್ (UGC) ದೇಶಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳನ್ನು ಮತ್ತೆ ತೆರೆಯಲು ಮಾರ್ಗಸೂಚಿಗಳನ್ನು ಹೊರಡಿಸಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್‌ನಿಂದ ಕಾಲೇಜುಗಳನ್ನು ಮುಚ್ಚಲಾಗಿದೆ.


COMMERCIAL BREAK
SCROLL TO CONTINUE READING

ಕೇಂದ್ರೀಯ ವಿಶ್ವವಿದ್ಯಾಲಯಗಳು ಮತ್ತು ಇತರ ಕೇಂದ್ರೀಯ ಅನುದಾನಿತ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಕ್ಯಾಂಪಸ್‌ಗಳನ್ನು ಮತ್ತೆ ತೆರೆಯುವ ನಿರ್ಧಾರವನ್ನು ಅವರ ಉಪಕುಲಪತಿಗಳು ಮತ್ತು ಮುಖ್ಯಸ್ಥರಿಗೆ ಬಿಡಲಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ, ಸಂಬಂಧಪಟ್ಟ ರಾಜ್ಯ ಸರ್ಕಾರಗಳು ತೀರ್ಮಾನ ಕೈಗೊಳ್ಳಬೇಕು ಎಂದು ಮಾರ್ಗಸೂಚಿಗಳಲ್ಲಿ ಸ್ಪಷ್ಟಪಡಿಸಲಾಗಿದೆ.


ಇದನ್ನು ಓದಿ- ದೇಶದಲ್ಲಿ 24 ನಕಲಿ ವಿವಿಗಳು ಇವೆ ಎಂದು ಘೋಷಿಸಿದ ಯುಜಿಸಿ..!


ಮಾರ್ಗಸೂಚಿಗಳ ಪ್ರಕಾರ, ಆಯಾ ರಾಜ್ಯ ಸರ್ಕಾರಗಳ ನಿರ್ಧಾರಗಳ ಪ್ರಕಾರ ರಾಜ್ಯ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಸೇರಿದಂತೆ ಇತರ ಎಲ್ಲ ಸಂಸ್ಥೆಗಳಿಗೆ ತರಗತಿಗಳು ಪ್ರಾರಂಭವಾಗಲಿವೆ.
ರಾಜ್ಯಗಳಿಗೆ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವ ಅಧಿಕಾರವಿಲ್ಲ: ಯುಜಿಸಿ


ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳು ಕಂಟೈನ್‌ಮೆಂಟ್ ವಲಯದಿಂದ ಹೊರಗಿರುವಾಗ ಮಾತ್ರ ಅವುಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮಾರ್ಗಸೂಚಿಗಳಲ್ಲಿ ಸ್ಪಷ್ಟಪಡಿಸಲಾಗಿದೆ. ಇದಲ್ಲದೆ, ಕಂಟೈನ್‌ಮೆಂಟ್ ವಲಯದಲ್ಲಿ ವಾಸಿಸುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಕಾಲೇಜುಗಳಿಗೆ ಹೋಗಲು ಅವಕಾಶವಿರುವುದಿಲ್ಲ.


ಇದನ್ನು ಓದಿ- ಅಂತಿಮ ವರ್ಷದ ಪರೀಕ್ಷೆ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು


ಕಂಟೈನ್‌ಮೆಂಟ್ ವಲಯದಲ್ಲಿ ಬರುವ ಪ್ರದೇಶಗಳಿಗೆ ಭೇಟಿ ನೀಡದಂತೆ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿಗೆ ಸೂಚಿಸಲಾಗುವುದು. ಆರೋಗ್ಯ ಸೇತು ಆ್ಯಪ್ ಡೌನ್‌ಲೋಡ್ ಮಾಡಲು ವಿಶ್ವವಿದ್ಯಾಲಯ ಮತ್ತು ಕಾಲೇಜು ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದೂ ಕೂಡ ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ.