ನವದೆಹಲಿ: ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಮುಂಬರುವ 2019ರ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ.ಆದರೆ ಕೇವಲ ಚುನಾವಣಾ ರಾಜಕಾರಣಕ್ಕೆ ಮಾತ್ರ ಗುಡ್ ಬಾಯಿ ಹೇಳುತ್ತಿದ್ದು ಆದರೆ ರಾಜಕೀಯದಲ್ಲಿ ಕ್ರಿಯಾಶೀಲವಾಗಿರುವುದರಾಗಿ ತಿಳಿಸಿದ್ದಾರೆ. ಆದರೆ ಇದಕ್ಕೆ ಬಿಜೆಪಿ ಪಕ್ಷದಿಂದ ಒಪ್ಪಿಗೆ ಪಡೆಯಬೇಕಾಗಿದೆ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಉಮಾ ಭಾರತಿ ರಾಮಮಂದಿರ ಮತ್ತು ಗಂಗಾ ನದಿಯನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಕ್ರಿಯಾಶೀಲವಾಗಿರುವುದರ ಮೂಲಕ ರಾಜಕೀಯದಲ್ಲಿ ಕ್ರಿಯಾಶೀಲವಾಗಿರುತ್ತೇನ. ಜನವರಿ15 ರಿಂದ ಗಂಗಾ ನದಿಯ ಸ್ವಚ್ಛತೆಗಾಗಿ ಯಾತ್ರೆಯನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.


ಇದೇ ವೇಳೆ ರಾಮಮಂದಿರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು "ಎಲ್ಲ ಪಕ್ಷಗಳನ್ನು ಈ ವಿಚಾರವಾಗಿ ಒಮ್ಮತಕ್ಕೆ ತೆಗೆದುಕೊಳ್ಳಬೇಕಾಗಿದೆ. ರಾಮಮಂದಿರ ವಿಷಯವು ಈ ದೇಶದ ಸೌಹಾರ್ಧತೆಗೆ ಸಂಬಂಧಿಸಿದೆ. ಆದ್ದರಿಂದ ಇದನ್ನು ಸಾಧ್ಯವಾದಷ್ಟು ಬೇಗ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.