ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಿದ ಕಿಡಿಗೇಡಿಗಳು, 6 ಪ್ರಯಾಣಿಕರಿಗೆ ಗಾಯ
ಮನ್ಪುರ್ ಜಂಕ್ಷನ್ ಬಳಿ ಸಿಯಾಲ್ಡಾ - ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ.
ನವದೆಹಲಿ: ಮನ್ಪುರ್ ಜಂಕ್ಷನ್ನಲ್ಲಿ ಸಿಯಾಲ್ಡಾ - ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ಸೋಮವಾರ ತಡ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಸಮಯದಲ್ಲಿ ರೈಲಿನ ಗಾಜುಗಳು ಪುಡಿಪುಡಿಯಾಗಿದ್ದು, ಅದನ್ನು ಗಯಾ ಜಂಕ್ಷನ್ ರೈಲು ನಿಲ್ದಾಣದಲ್ಲಿ ಬದಲಾಯಿಸಲಾಗಿದೆ. ದುಷ್ಕರ್ಮಿಗಳ ಈ ಕೃತ್ಯಕ್ಕೆ ಕಾರಣವೇನೆಂದು ತಿಳಿದಿಲ್ಲ, ತನಿಖೆ ಪ್ರಗತಿಯಲ್ಲಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.